ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಎಸ್ಸೆಸ್ ಬೆಂಬಲ

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಎಸ್ಸೆಸ್ ಬೆಂಬಲ

ದಾವಣಗೆರೆ, ನ.15- ಹರಿಹರದ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇಂದು ಅಭಿಯಾನದ ಅಂಗವಾಗಿ ನಡೆದ ಪಾದಯಾತ್ರೆಗೆ ಚಾಲನೆ ನೀಡಿದ ಅವರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿ ಕಾಮಗಾರಿ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು.

ನಂತರ ಹರಿಹರದ ಪಂಚಮಸಾಲಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಎಸ್.ಕೆ.ವೀರಣ್ಣ, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಹರ ಜಾತ್ರೆ ಅಧ್ಯಕ್ಷ ಪ್ರಕಾಶ್ ಪಾಟೀಲ್, ಜೊಳ್ಳಿ ಗುರು ಮತ್ತಿತರರಿದ್ದರು.

error: Content is protected !!