ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ಸಂಸದರಿಗೆ ಮನವಿ

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ಸಂಸದರಿಗೆ ಮನವಿ

ದಾವಣಗೆರೆ, ನ. 22- ಕಳೆದ ಹತ್ತು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆ ಯರಿಗೆ ಮತ್ತು ಸಹಾಯಕಿಯರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಿಸಿರುವುದಿಲ್ಲ. ಆದ್ದರಿಂದ ಬರುವ ಬಜೆಟ್‌ನಲ್ಲಿ ವೇತನ ಹೆಚ್ಚಿಸಬೇಕು ಎಂದು ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಲಾಯಿತು.

ಸಂಸದರ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಅಹವಾಲನ್ನು ಸ್ವೀಕರಿಸಿ ಮಾತನಾಡಿದ ಸಂಸದರು, ಇದರ ಬಗ್ಗೆ ಪ್ರಧಾನ ಮಂತ್ರಿ ಅಥವಾ ಇಲಾಖೆಯ ಮುಖ್ಯಸ್ಥರನ್ನು ಭೇಟಿಯಾಗಿ ಅವರ ಜೊತೆ ಮಾತನಾಡುವು ದಾಗಿ ತಿಳಿಸಿದರು.  ಈ ಸಂದರ್ಭದಲ್ಲಿ ಎಸ್.ಎಸ್. ಮಲ್ಲಮ್ಮ, ಹೊಸಳ್ಳಿ ಮಂಜುಳಾ, ಕುಸುಮ, ಕೆ.ಸಿ. ನಿರ್ಮಲ, ಗೀತಾ, ಸುಶೀಲಮ್ಮ, ಭರಮಕ್ಕ, ಚನ್ನಮ್ಮ, ಪುಷ್ಪಾ, ರೂಪಾ, ಶಶಿಕಲಾ, ನಾಗರತ್ನ, ಕೆ.ಜಿ. ಗೀತಾ,  ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಆವರಗೆರೆ ಚಂದ್ರು, ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಹೆಚ್.ಜಿ. ಉಮೇಶ್, ನರೇಗಾ ರಂಗನಾಥ್ ಮತ್ತಿತರರು ಇದ್ದರು.

error: Content is protected !!