ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವು ನಡೆಯುತ್ತಿದ್ದು, ನಾಲ್ಕನೇ ದಿನವಾದ ಇಂದು ಸಂಜೆ 5.30ಕ್ಕೆ ನಗರ ಪಾಲಿಕೆ ಆವರಣದ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗ ಮಂದಿರದ ಭವ್ಯ ದಿವ್ಯ ವೇದಿಕೆಯಲ್ಲಿ ಐವರು ಅಮೃತ ಪುರುಷರಿಗೆ ಪೌರ ಸನ್ಮಾನ ನೀಡಿ ಗೌರವಿಸಲಾಗುವುದು ಎಂದು ಮಹಾಪೌರರಾದ ಕೆ. ಚಮನ್ ಸಾಬ್ ತಿಳಿಸಿದ್ದಾರೆ.
ಹಿರಿಯ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ, ಹಿರಿಯ ವರ್ತಕರಾದ ಚನ್ನಗಿರಿ ವಿರೂಪಾಕ್ಷಪ್ಪ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಹಿರಿಯ ವೈದ್ಯ ಡಾ. ಎಸ್.ಎಂ. ಎಲಿ, ಹಿರಿಯ ರೈತ ಹೋರಾಟಗಾರ ಸಿ. ನರಸಿಂಹಪ್ಪ ಮತ್ತು ಶಿಕ್ಷಣ ತಜ್ಞ ಕೆ. ಇಮಾಂ ಅವರುಗಳಿಗೆ ಪೌರ ಸನ್ಮಾನ ನೀಡಲಾಗುತ್ತದೆ.
ಮೇಯರ್ ಕೆ. ಚಮನ್ ಸಾಬ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಡಾ. ರಂಜಾನ್ ದರ್ಗಾ ವಿಶೇಷ ಉಪನ್ಯಾಸ ನೀಡುವರು.