ಉಜ್ಜಿನಿ, ನ.28- ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ (ಬೆಂಗಳೂರು) ವತಿಯಿಂದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ. ಬಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಐ.ಎಂ. ದಾರುಕೇಶ್ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮುಖಂಡ ಗುರುಸಿದ್ದನಗೌಡ್ರು, ಸಂಘದ ಅಧ್ಯಕ್ಷ ಡಿ. ರೇವಣಸಿದ್ದೇಶ್ವರ, ಕೊಡದಪ್ಪ ಮತ್ತಿತರರು ಉಪಸ್ಥಿತರಿದ್ದರು.
January 11, 2025