ಕಾಂಗ್ರೆಸ್ ನಾಯಕರ ಒಗ್ಗಟ್ಟಿನ ಪ್ರಯತ್ನದಿಂದ ಗೆಲುವು : ಘನಿ ತಾಹೇರ್

ಕಾಂಗ್ರೆಸ್ ನಾಯಕರ ಒಗ್ಗಟ್ಟಿನ ಪ್ರಯತ್ನದಿಂದ ಗೆಲುವು : ಘನಿ ತಾಹೇರ್

ದಾವಣಗೆರೆ, ಡಿ. 1 – ರಾಜ್ಯದಲ್ಲಿ ಈಚೆಗೆ ನಡೆದ ಉಪಚುನಾವಣೆಯಲ್ಲಿ  ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿರುವುದು ಕಾಂಗ್ರೆಸ್ ಪಕ್ಷದ ಒಗ್ಗಟ್ಟಿನ ಪ್ರಯತ್ನ ಮತ್ತು ಅಹಿಂದ ವರ್ಗದ ಮತಗಳು ವಿಭಜನೆಯಾಗದಂತೆ ನೋಡಿಕೊಂಡಿರುವುದರ ಪ್ರತಿಫಲ ಎಂದು ಕರ್ನಾಟಕ ರಾಜ್ಯ ವಕ್ಪ್ ಪರಿಷತ್ ಸದಸ್ಯ ಘನಿ ತಾಹೀರ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಜ್ಞಾವಂತ ಮತದಾರರು
ಗೆಲ್ಲಿಸಿದ್ದಾರೆ. 

ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿಗಳು ಜಾರಿಗೆ ತಂದಿರುವ ಗ್ಯಾರಂಟಿಗಳ ಯೋಜನೆಗೆ ರಾಜ್ಯ ಮತದಾರರು ಮನ್ನಣೆ ನೀಡಿದ್ದಾರೆ. ಈ ಉಪ ಚುನಾವಣೆಯಲ್ಲಿ ಅಹಿಂದ ಮತದಾರರು ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದ್ದಾರೆ. 

error: Content is protected !!