ಪಕ್ಷ ವಿರೋಧಿ ಚಟುವಟಿಕೆ ಆರೋಪ ಶಿಗ್ಗಾವಿಯಲ್ಲಿ ಕ್ರಮ, ದಾವಣಗೆರೆಯಲ್ಲಿ ಏಕಿಲ್ಲ

ಪಕ್ಷ ವಿರೋಧಿ ಚಟುವಟಿಕೆ ಆರೋಪ  ಶಿಗ್ಗಾವಿಯಲ್ಲಿ ಕ್ರಮ, ದಾವಣಗೆರೆಯಲ್ಲಿ ಏಕಿಲ್ಲ

ಪಕ್ಷದ ವರಿಷ್ಠರನ್ನು ಪ್ರಶ್ನಿಸಿದ ದೂಡಾ ಮಾಜಿ ಅಧ್ಯಕ್ಷ ಎ. ವೈ ಪ್ರಕಾಶ್  

ದಾವಣಗೆರೆ, ಡಿ. 1- ಕಳೆದ ವಾರ ನಡೆದ ವಿಧಾನಸಭಾ ಉಪಚುನಾವಣೆ ಯಲ್ಲಿ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋತ ಹಿನ್ನೆಲೆಯಲ್ಲಿ ಪಕ್ಷದ ಕೆಲವು ಕಾರ್ಯಕರ್ತರನ್ನು ಪಕ್ಷ ವಿರೋಧಿ ಚಟುವಟಿಕೆ ಕಾರಣ ನೀಡಿ ಉಚ್ಛಾಟಿಸಲಾಗಿದೆ. ಆದರೆ, ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣರಾದ ವ್ಯಕ್ತಿಗಳ ಮೇಲೆ ಇದುವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ. ವೈ ಪ್ರಕಾಶ್ ಅವರು ಪಕ್ಷದ ವರಿಷ್ಠರನ್ನು ಪ್ರಶ್ನಿಸಿದ್ದಾರೆ.

ಹೊಂದಾಣಿಕೆ ರಾಜಕಾರಣವೇ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಕಾರಣವಾಗಿದೆ. ಯಾರು ಯಾರ ಜೊತೆ ಯಾವ ರೀತಿ ಹೊಂದಾಣಿಕೆ ಮಾಡಿಕೊಂಡಿರುತ್ತಾರೆ ಎಂಬ ಬಗ್ಗೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ರಾಜಕೀಯ ಬಲ್ಲ ಎಲ್ಲ ಪಕ್ಷಗಳ ಕಾರ್ಯಕರ್ತರು, ಮತದಾರರು ಮುಕ್ತವಾಗಿ ಮಾತನಾಡಿಕೊಳ್ಳುತ್ತಿದ್ದಾರೆ. 

ಒಟ್ಟಿನಲ್ಲಿ ಈ ಹೊಂದಾಣಿಕೆ ರಾಜಕೀಯದಿಂದಾಗಿ ಬಿಜೆಪಿ ಅಭ್ಯರ್ಥಿ ದಾವಣ ಗೆರೆ ಲೋಕಸಭಾ ಕ್ಷೇತ್ರ ದಲ್ಲಿ ಸೋಲಬೇಕಾಯಿತು. ಅದಕ್ಕೆ ಕಾರಣರಾದ ಜಿಲ್ಲೆಯ ಎಲ್ಲಾ ಕ್ಷೇತ್ರದ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮತ್ತು ಪಕ್ಷದ ಸೋಲಿಗೆ ಕಾರಣರಾದ ವ್ಯಕ್ತಿಗಳನ್ನು ತಕ್ಷಣ ಪಕ್ಷ ದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.

ಅದೇ ರೀತಿ ದಾವಣಗೆರೆ ಲೋಕಸಭಾ ಕ್ಷೇತ್ರದ ಮತದಾರರ ಮನದಾಳವನ್ನು ಅರಿಯದೇ ಸೋಲಿಗೆ ಕಾರಣರಾದ ನಾಯಕರುಗಳು ಮತದಾರರಲ್ಲಿ ಜಿಗುಪ್ಸೆ ಆಗುವಂತೆ ನಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣರಾದವರೇ ಪಕ್ಷ ಸಂಘಟನೆ ಬಗ್ಗೆ ಕಾರ್ಯಕರ್ತರಿಗೆ ಕರೆ ನೀಡುತ್ತಿರುವುದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.

ತಾವಿದ್ದರೆ ಮಾತ್ರ ಪಕ್ಷ, ತಮ್ಮಿಂದಲೇ ಪಕ್ಷ, ತಾವೇ ಪಕ್ಷ, ತಾವೇ ಕಟ್ಟಿ ಬೆಳೆಸಿದವರು ಎಂಬಂತೆ ಫೋಟೋಗೋ ಫೋಸ್ ನೀಡುತ್ತಿದ್ದಾರೆ. ಕಾರ್ಯಕರ್ತರಿಂದ ನಾಯಕರಾಗಿ ಬೆಳೆದು ಅಧಿಕಾರ ಅನುಭವಿಸಿ, ವೈಯಕ್ತಿಕ ತೆವಲಿಗಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿ, ಪಕ್ಷದ ಸೋಲಿಗೆ ಕಾರಣರಾಗಿದ್ದು, ಈ ಮೂಲಕ ಪಕ್ಷದ ಕಾರ್ಯಕರ್ತರಿಗೆ ಮೋಸ ಮಾಡಿದ್ದಾರೆ. ಒಂದು ಪಕ್ಷ ಬೆಳೆಯಬೇಕಾದರೆ ಕಾರ್ಯಕರ್ತರ ಪಾತ್ರವೇ ಮಹತ್ವದ್ದು. ಕಾರ್ಯಕರ್ತರಿ ದ್ದರೆ ಮಾತ್ರ ಒಬ್ಬ ನಾಯಕ ಬೆಳೆಯಲು ಸಾಧ್ಯ. ಕಾರ್ಯಕರ್ತರನ್ನು ಮರೆತು, ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಪಕ್ಷದ ಸೋಲಿಗೆ ಕಾರಣರಾದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು  ಪ್ರಕಾಶ್ ಒತ್ತಾಯಿಸಿದ್ದಾರೆ.

error: Content is protected !!