ತ್ಯಾವಣಿಗೆ, ಡಿ. 1- ಇಲ್ಲಿನ ಸರ್ಕಾರಿ ಪ.ಪೂ. ಕಾಲೇಜು ಮತ್ತು ಅಪ್ಪು ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಕ್ಲಸ್ಟರ್ ಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
ಯೂನಿಯನ್ ಬ್ಯಾಂಕ್‌ನ ವ್ಯವಸ್ಥಾಪಕ ಶ್ರೀಹರ್ಷ ಕಾರ್ಯಕ್ರಮ ಉದ್ಘಾಟಿಸಿ ಕರ್ನಾಟಕದಲ್ಲಿ ಕನ್ನಡ ಭಾಷೆಯ ಪ್ರಾಮುಖ್ಯತೆ ಮತ್ತು ಬಳಸಿ ಬೆಳೆಸುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಏರ್ಪಡಿಸಿದ್ದ ಸ್ಪಷ್ಟ ಓದು, ಶುದ್ಧ ಬರಹ ಮತ್ತು ಕಾವ್ಯ ವಾಚನ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಅಪ್ಪು ಸಹಕಾರ ಸಂಘದ ಅಧ್ಯಕ್ಷ ಗಂಗಾಧರಯ್ಯ ಕನ್ನಡ ಭಾಷೆಯ ಐತಿಹಾಸಿಕ ಮಹತ್ವದ ಬಗ್ಗೆ ತಿಳಿಸಿದರು. ಹಿರಿಯ ಉಪನ್ಯಾಸಕ ವಿವೇಕಾನಂದ, ಪ್ರಾಂಶುಪಾಲ ವಿ.ಎಸ್. ಮಲ್ಲಿಕಾರ್ಜುನ್ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಅಣ್ಣಪ್ಪ, ಸಿಬಿಸಿ ಉಪಾಧ್ಯಕ್ಷ ಅಣ್ಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಆಂಜನೇಯ, ಸದಸ್ಯರಾದ ಶಿವಕುಮಾರ್, ಮಲ್ಲೇಶಪ್ಪ, ಜಯರಾಂ, ಹಾಗೂ ಇತರರು ಉಪಸ್ಥಿತರಿದ್ದರು. ಕಾಲೇಜು ವಿಭಾಗದ ಉಪನ್ಯಾಸಕರು ಹಾಗೂ ಪ್ರೌಢ ಶಾಲೆಯ ಶಿಕ್ಷಕರು ಮತ್ತು ಕ್ಲಸ್ಟರ್ ನ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
ಕು. ಮೇಘನ ಸಂಗಡಿಗರು ಪ್ರಾರ್ಥಿಸಿದರು. ಚಂದ್ರಶೇಖರ ನಾಯ್ಕ ಸ್ವಾಗತಿಸಿದರು. ಮಂಜಪ್ಪ ಎ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರ ವೀಂದ್ರನಾಥ್ ಎಚ್.ಕೆ. ವಂದಿಸಿದರು, ಮಹಾಂತೇಶ್ ಬಿ. ನಿಟ್ಟೂರು ಕಾರ್ಯಕ್ರಮ ನಿರೂಪಿಸಿದರು.