ನ್ಯಾಮತಿ ಕಾರ್ಯಕ್ರಮದಲ್ಲಿ ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ
ನ್ಯಾಮತಿ,ಡಿ.2- ಜಿಲ್ಲೆಯಲ್ಲಿಯೇ ಹೊನ್ನಾಳಿ ಮತ್ತು ನ್ಯಾಮತಿ ಕ್ಷೇತ್ರಗಳು ಈ ಬಾರಿ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಬರುವಲ್ಲಿ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ದೊಡ್ಡೇರಿಯ ಜ್ಞಾನವಾಹಿನಿ ವಿದ್ಯಾಸಂಸ್ಥೆಯಲ್ಲಿ ಕ್ವಿಜ್ಲಿ ಆಪ್ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಅವಳಿ ತಾಲೂಕುಗಳ ಮುಖ್ಯ ಶಿಕ್ಷಕರ ಸಭೆಯ ನ್ನುದ್ದೇಶಿಸಿ ಅವರು ಮಾತನಾಡಿದರು.
ಈಗಾಗಲೇ ಜ್ಞಾನವಾಹಿನಿ ವಿದ್ಯಾ ಸಂಸ್ಥೆಯಲ್ಲಿ ಕಾರ್ಯದರ್ಶಿ ಡಿ.ಎ. ರವಿಶಂಕರ್ ಅವರ ದೂರದೃಷ್ಟಿಯಿಂದ ಈ ಕ್ವಿಜ್ಲಿ ಆಪ್ ತಂತ್ರಜ್ಞಾನವನ್ನು ಬಳಸಿಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ. ಇದರ ಸಂಬಂಧ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಸಭೆ ಕರೆದು ಈ ಆಪ್ ಬಗ್ಗೆ ಮಾಹಿತಿ ನೀಡಲಾಗಿದ್ದು, ಇದರಿಂದ ಉತ್ತಮ ಫಲಿತಾಂಶ ಗಳಿಸಲು ಸಾಧ್ಯವಿದೆ ಎಂದು ಹೇಳಿದರು.
ಆಪ್ ಅನ್ನು ಚನ್ನಗಿರಿ ತಾಲ್ಲೂಕುಗಳ ಶಾಲೆಗಳಲ್ಲಿಯೂ ಅಳವಡಿಸಿದ್ದು, ಅಲ್ಲಿನ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಬಂದಿರುವ ಹಿನ್ನೆಲೆ ಯಲ್ಲಿ ಅವಳಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳಲ್ಲೂ ಕೂಡ ಕ್ವಿಜ್ಲಿ ಆಪ್ ತಂತ್ರಜ್ಞಾನ ಅವಳಡಿಸಲು ನಿರ್ಧರಿಸ ಲಾಗಿದೆ ಎಂದು ಮಾಹಿತಿ ನೀಡಿದರು.
ಬಿಇಓ ಕೆ.ಟಿ. ನಿಂಗಪ್ಪ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಸುಮಾರು 200 ಶಾಲೆಗಳಲ್ಲಿ ಈ ಆಪ್ ಅನ್ನು ಅಳವಡಿಸಿ ಉತ್ತಮ ಫಲಿತಾಂಶವನ್ನು ಪಡೆಯುತ್ತಿವೆ. ಅವಳಿ ತಾಲ್ಲೂಕುಗಳ ಒಟ್ಟು 64 ಪ್ರೌಢ ಶಾಲೆಗಳಲ್ಲಿ ಈ ಸೌಲಭ್ಯ ಒದಗಿಸಲು ಶಾಸಕರ ಸಹಕಾರದಿಂದ ಕ್ರಮ ಕೈಗೊಳ್ಳಲಾಗಿದೆ, ಪ್ರಸ್ತುತ 3267 ವಿದ್ಯಾರ್ಥಿಗಳಿಗೆ ಇದು ಸಹಕಾರಿಯಾಗಲಿದೆ ಎಂದರು.
ಜ್ಞಾನವಾಹಿನಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಿ.ಎ.ರವಿಶಂಕರ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕಾ ಶಕ್ತಿ ಮತ್ತು ಅಗತ್ಯಗಳನ್ನು ತಿಳಿದು ಅವರ ಯಶಸ್ಸನ್ನು ಖಾತರಿಪಡಿಸಿಕೊಳ್ಳಲು ಈ ಆಪ್ ಬಹು ಉಪಕಾರಿಯಾಗಿದೆ, ಹಾಗಾಗಿ ನಮ್ಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಆಪ್ ಮೂಲಕ ಬೋಧನೆ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದರು.
ಸಭೆಯಲ್ಲಿ ಕ್ವಿಜ್ಲಿ ಸಂಸ್ಥೆಯ ಸಿಇಒ ದೀಪಕ್ ರಾಮಚಂದ್ರನ್, ಪ್ರತೀಕ್‍ಪ ಟೇಲ್, ಶ್ರೀಕಾಂತ್‍ನಾಗರಾಜ್, ಉಜ್ವಲ್ ಕುಮಾರ್ ಮತ್ತು ಅವಳಿ ತಾಲ್ಲೂಕಿನ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಇದ್ದರು.