ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ದಾವಣಗೆರೆ, ಡಿ. 2 – ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅವಶ್ಯಕತೆಗೆ ಅನುಗುಣವಾಗಿ ವಿವಿಧ ಇಲಾಖೆಗಳ ಮೂಲಕ ಅನುದಾನ ನೀಡುತ್ತಿದ್ದು, ಈ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಯಡಿಯಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಿ ಅವರು ಮಾತನಾಡಿದರು.

ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಹಾಪೌರರಾದ ಕೆ.ಚಮನ್‍ಸಾಬ್, ಅಯೂಬ್ ಪೈಲ್ವಾನ್ ಮತ್ತಿತರರು ಮಾತನಾಡಿದರು.

ಉಪ ಮಹಾಪೌರರಾದ ಸೋಗಿ ಶಾಂತಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಶ್ರೀಮತಿ ಸುಧಾ ಇಟ್ಟಿಗುಡಿ ಮಂಜುನಾಥ್, ಶ್ರೀಮತಿ ಸವಿತಾ ಗಣೇಶ್ ಹುಲ್ಮನಿ, ಶ್ರೀಮತಿ ಆಶಾ ಉಮೇಶ್, ಶ್ರೀಮತಿ ಹುರ್‍ಬಾನು ಪಂಡಿತ್, ಸದಸ್ಯರುಗಳಾದ ಎ.ಬಿ. ರಹೀಂ, ಜಿ.ಡಿ. ಪ್ರಕಾಶ್, ಜಾಕೀರ್ ಅಲಿ, ಕಬೀರ್ ಅಲಿ, ಶ್ರೀಮತಿ ನೂರ್ ಜಹಾನ್ ಬೀ, ದಾದಾಪೀರ್  , ಶಫೀಕ್‍  ಪಂಡಿತ್, ಮುಖಂಡರುಗಳಾದ ಫಾರೂಕ್,  ಅನ್ವರ್, ದಾದಾಪೀರ್, ನಿರ್ಮಿತಿ ಕೇಂದ್ರದ ಚಂದನ್, ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು. 

error: Content is protected !!