ದಾವಣಗೆರೆ, ಡಿ.3- ರಾಜ್ಯದಲ್ಲಿ ವಕ್ಫ್ ಬೋರ್ಡಿನ ಮೂಲಕ ರೈತರ ಕೃಷಿ ಭೂಮಿ, ಮಠ ಹಾಗೂ ದೇವಸ್ಥಾನದ ಜಮೀನುಗಳನ್ನು ಅಕ್ರಮವಾಗಿ ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಭಾನುವಾರ ನಡೆದ ಜನಜಾಗೃತಿ ಹೋರಾಟದಲ್ಲಿ ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಭಾಗವಹಿಸಿದ್ದರು.
ಈ ವೇಳೆ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳೆ, ಬಿ.ಪಿ. ಹರೀಶ್, ಎಂ. ಚಂದ್ರಪ್ಪ, ಮಾಜಿ ಸಂಸದ ಪ್ರತಾಪಸಿಂಹ, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ, ಮುಖಂಡ ಎನ್.ಆರ್. ಸಂತೋಷ್ ಇತರರು ಇದ್ದರು.