ದಾವಣಗೆರೆ, ಡಿ.4- ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಕಳೆದ ಅಕ್ಟೋಬರ್ನಲ್ಲಿ ನಡೆಸಿದ ಜ್ಯೋತಿಷ್ಯ ಸರ್ಟಿಫಿಕೇಟ್ ಕೋರ್ಸ್ ಪರೀಕ್ಷೆಯಲ್ಲಿ ನಗರದ ಶ್ರೀ ಭಾಸ್ಕರಾಚಾರ್ಯ ಜ್ಯೋತಿರ್ವಿದ್ಯಾ ಪ್ರತಿಷ್ಠಾನಕ್ಕೆ ಶೇ.100 ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಮೂವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಎಸ್.ಜಿ. ನಾಗರಾಜ್ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಪ್ರಾಂಶುಪಾಲ ಆರ್. ಬಿ. ಪ್ರವೀಣಕುಮಾರ್ (99640 62223) ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿಯ ಅಧ್ಯಕ್ಷ ಎಂ. ಗದಿಗೆಪ್ಪಯ್ಯ, ಕಾರ್ಯದರ್ಶಿ ಸಿ.ಕೆ. ಆನಂದತೀರ್ಥಾಚಾರ್ ಸಂತಸ ವ್ಯಕ್ತಪಡಿಸಿದ್ದಾರೆ.
February 5, 2025