ತಾಲ್ಲೂಕು ಕಸಾಪದಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ

ತಾಲ್ಲೂಕು ಕಸಾಪದಿಂದ  ದತ್ತಿ ಉಪನ್ಯಾಸ ಕಾರ್ಯಕ್ರಮ

ದಾವಣಗೆರೆ, ಡಿ.5- ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಾಲಾ-ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಕಾಳಿಕಾದೇವಿ ರಸ್ತೆಯಲ್ಲಿರುವ ಪದ್ಮಭೂಷಣ ಡಾ. ರಾಜಕುಮಾರ್ ಪ್ರೌಢಶಾಲೆಯಲ್ಲಿ ನಡೆಸಲಾಯಿತು. 

ಪದ್ಮಭೂಷಣ ಡಾ.ರಾಜಕುಮಾರ್ ಪ್ರೌಢಶಾಲೆಯ ಶಿಕ್ಷಕರಾದ ರಾಜು ಎನ್. ಕೊಪ್ಪಳ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಸಾಪ ನಿರ್ದೇಶಕ ಷಡಕ್ಷರಪ್ಪ ಎಂ. ಬೇತೂರು ಪ್ರಾಸ್ತಾವಿಕವಾಗಿ ಮಾತನಾಡಿದರು. 

ಜಿಲ್ಲಾ ಪಂಚಾಯತ್ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮಹೇಶಪ್ಪ ದೊಡ್ಮನಿ ಇವರು `ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’ ಕುರಿತು ಉಪನ್ಯಾಸ ನೀಡಿದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ, ನಿರ್ದೇಶಕರಾದ ಕೆ.ಜಿ. ಸೌಭಾಗ್ಯ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಉಪಸ್ಥಿತರಿದ್ದರು.

error: Content is protected !!