ದಾವಣಗೆರೆ, ಡಿ.5- ತಾಲ್ಲೂಕು ಕ.ಸಾ.ಪ. ದಾವಣಗೆರೆ, ಹರಪನಹಳ್ಳಿ ಮುಪ್ಪಣ್ಣ ಸಿದ್ದಮ್ಮ ಪ್ರೌಢಶಾಲೆ ಬೂದಾಳ್ ರಸ್ತೆ ದಾವಣಗೆರೆ ಇವರ ಸಹಯೋಗದಲ್ಲಿ ಶಾಲಾ-ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ದತ್ತಿ ಉಪನ್ಯಾಸ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು. ಹರಪನಹಳ್ಳಿ ಮುಪ್ಪಣ್ಣ ಸಿದ್ದಮ್ಮ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಆಂಜನೇಯ ಜಿ. ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಸಾಪ ನಿರ್ದೇಶಕ ಷಡಕ್ಷರಪ್ಪ ಎಂ. ಬೇತೂರು ಪ್ರಾಸ್ತಾವಿಕ ನುಡಿಯನ್ನಾಡಿದರು. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸದಸ್ಯರಾದ ಮಲ್ಲಿಕಾರ್ಜುನ್ ಆರ್. ಹಲಸಂಗಿ ಅಕ್ಕಮಹಾದೇವಿಯ ಆದರ್ಶಗಳ ಕುರಿತು ಉಪನ್ಯಾಸ ನೀಡಿದರು. ಗೌರವ ಉಪಸ್ಥಿತಿ ತಾ|| ಕಸಾಪ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ, ನಿರ್ದೇಶಕರಾದ ಶ್ರೀಮತಿ ಕೆ.ಜಿ. ಸೌಭಾಗ್ಯ, ಡಾ.ರಾಜಕುಮಾರ್ ವಿದ್ಯಾ ಸಂಸ್ಥೆ ನಿರ್ದೇಶಕರಾದ ಶ್ರೀಮತಿ ರಾಜೇಶ್ವರಿ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ವಿ. ಹನುಮಂತ್ ರೆಡ್ಡಿ ಉಪಸ್ಥಿತರಿದ್ದರು.
December 22, 2024