ತರಳಬಾಳು ಬಡಾವಣೆಯ ಶ್ರೀ ಶಿವಕುಮಾರ ಸ್ವಾಮಿ ಮಹಾಮಂಟ ಪದಲ್ಲಿರುವ ಶ್ರೀ ವಿಶ್ವಬಂಧು ಮರಳಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು ಸಂಜೆ 6 ಗಂಟೆಗೆ ಸಿರಿಗೆರೆಯ ತರಳಬಾಳು ಬೃಹನ್ಮಠದ ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ನಂದಾದೀಪ ಬೆಳಗಿಸುವುದರ ಮೂಲಕ ಕಾರ್ತಿಕೋತ್ಸವದ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ, ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದ ಆವರಣದಲ್ಲಿರುವ ಶ್ರೀ ವಿಶ್ವಬಂಧು ಮರುಳಸಿದ್ಧೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ 6.30ಕ್ಕೆ 17 ನೇ ವರ್ಷದ ಕಾರ್ತಿಕೋತ್ಸವದ ಪ್ರಯುಕ್ತ ಸಹಸ್ರ ದೀಪೋತ್ಸವ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಸಂಜೆ 6 ಕ್ಕೆ ತರಳಬಾಳು ಬಡಾವಣೆಯ ಶಿವಕುಮಾರಸ್ವಾಮಿ ಮಹಾಮಂಟಪದಲ್ಲಿರುವ ಶ್ರೀ ಮರುಳಸಿದ್ದೇಶ್ವರ ದೀಪೋತ್ಸವ ಕಾರ್ಯಕ್ರಮಕ್ಕೆ ಜಗದ್ಗುರುಗಳು ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ, ಜಿಲ್ಲಾಧಿಕಾರಿ ಡಾ. ಜಿ.ಎಂ.ಗಂಗಾಧರ ಸ್ವಾಮಿ, ಶ್ರೀಮತ್ ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಹೆಚ್.ಆರ್. ಬಸವ ರಾಜಪ್ಪ ಉಪಸ್ಥಿತರಿರುವರು.
ಶ್ರೀ ವಿಶ್ವಬಂಧು ಮರುಳಸಿದ್ದೇಶ್ವರ ದೇವಸ್ಥಾನ ಕಾರ್ತಿಕ ಸಮಿತಿ ಅಧ್ಯಕ್ಷ ಹೆಚ್. ಜಯಣ್ಣ ರಾಮಗೊಂಡ ನಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ನಂತರ ಕಲ್ಯಾಣ ಮಂಟಪದಲ್ಲಿ ಸಿರಿಗೆರೆ ತರಳಬಾಳು ಕಲಾ ಸಂಘದಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಿದ್ದವೀರಪ್ಪ ಬಡಾವಣೆಯ ತುಳಸಿ ಮಹಿಳಾ ಸಂಘದಿಂದ ಗೋವಿನಹಾಡು (ನೃತ್ಯರೂಪಕ), ಭರತನಾಟ್ಯ, ಮಲ್ಲಕಂಬ, ಮಲ್ಲಿಹಗ್ಗ, ಜಡೆ ಕೋಲಾಟ, ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.