ಡಿ. ತೀರ್ಥಲಿಂಗಪ್ಪ ಅವರ ಜೀವನಾಧಾರಿತ ಕೃತಿ `ನಾನು, ನನ್ನ ಜೀವನ’ ಕೃತಿ ಬಿಡುಗಡೆ ಸಮಾರಂಭವು ಸಿರಿಗೆರೆಯ ತರಳಬಾಳು ಬೃಹನ್ಮಠದ ಶ್ರೀ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಅವರು ಕೃತಿಯನ್ನು ಬಿಡುಗಡೆ ಮಾಡುವರು. ಹಿರಿಯ ಸಾಹಿತಿ ಡಾ. ನಾ. ಲೋಕೇಶ್ ಒಡೆಯರ್ ಕೃತಿಯನ್ನು ಪರಿಚಯಿಸುವರು.
ಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಜಿ. ಧನಂಜಯ, ನಿವೃತ್ತ ಉಪನ್ಯಾಸಕ ಎಸ್. ಆರ್. ಬಸವರಾಜಪ್ಪ, ನ್ಯಾಮತಿ ತಾಲ್ಲೂಕಿನ ಸಾಧು ಸದ್ಧರ್ಮ ಸಮಾಜದ ಅಧ್ಯಕ್ಷ ಶಿವಪ್ಪ ಕೋಡಿಕೊಪ್ಪ, ಹೊನ್ನಾಳಿ ತಾಲ್ಲೂಕಿನ ಸಾಧು ಸದ್ಧರ್ಮ ಸಮಾಜದ ಅಧ್ಯಕ್ಷ ಗದಿಗೇಶ್ ಅವರುಗಳು ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿರುವರು.
ಸಾಧು ಸದ್ಧರ್ಮ ಸಮಾಜದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು.