ಕ್ಷತ್ರಿಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

ಕ್ಷತ್ರಿಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

ಹರಿಹರ, ಡಿ.10- ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸುವ ಹಾಗೂ ಎಸ್ಟಿ ಮೀಸಲಾತಿ ಸೌಲಭ್ಯ ನೀಡಲು ಬೆಳಗಾವಿ ಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ತೀರ್ಮಾನ ತೆಗೆದುಕೊಳ್ಳಲು ವಿಧಾನಸಭೆಯ ಎಲ್ಲಾ ಸದಸ್ಯರು ಬೆಂಬಲ ನೀಡುವಂತೆ ಎಸ್.ಎಸ್.ಕೆ ಸಮಾಜ ಅಭಿವೃದ್ಧಿ ಹೋರಾಟ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿ, ಸರ್ಕಾರಕ್ಕೆ ಒತ್ತಡ ಹಾಕುವು ದಕ್ಕಾಗಿ ನಗರದಿಂದ ಸಮಾಜದವರು ಭಾಗವಹಿಸಲು ನಿರ್ಧರಿಸಲಾಗಿತ್ತು. ಆದರೆ, ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸಮಿತಿಯ ಜಿಲ್ಲಾ ಕಾರ್ಯದರ್ಶಿ ಮೋತಿಲಾಲ್ ಖಿರೋಜಿ ಅವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. 

ಸ್ವಾತಂತ್ರ್ಯ ಪೂರ್ವ ದಿಂದಲೂ ನೇಕಾರಿಕೆ, ಕೈಮಗ್ಗ, ರೇಷ್ಮೆಗೆ ಬಣ್ಣ ಹಾಕುವುದು ಸಮಾಜದ ಹಿರಿಯರ ಕಸುಬು ಆಗಿತ್ತು,   ಆದರೆ ಕಾಲ ಬದಲಾದಂತೆ ನಮ್ಮ ಸಮಾಜ ಬಾಂಧವರು ಚಿಕ್ಕ ಪುಟ್ಟ ವ್ಯಾಪಾರ ವಹಿವಾಟು ನಡೆಸುವ ಮೂಲಕ   ಜೀವನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 6 -7 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, ಶೇ. 80 ರಷ್ಟು ಬಡತನ ರೇಖೆಗಿಂತ ಕೆಳಗಿದ್ದಾರೆ.  ನಿಶ್ಚಿತ ಆದಾಯ ಇಲ್ಲವಾಗಿದೆ.  ಮಕ್ಕಳಿಗೆ ಸರಿಯಾದ ವಿದ್ಯಾ ಭ್ಯಾಸ ನೀಡುವುದಕ್ಕೂ ಆಗುತ್ತಿಲ್ಲ  ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್.ಎಸ್.ಕೆ  ಸಮಾಜ ಹೋರಾಟ ಸಮಿತಿಯ ಉಪಾಧ್ಯಕ್ಷ ಶ್ರೀಕಾಂತ್ ಮೆಹರ್ವಾಡೆ, ತಾಲ್ಲೂಕು ಅಧ್ಯಕ್ಷ ವಿಕ್ರಮ ಮೆಹರ್ವಾಡೆ, ನಿರ್ದೇಶಕ ನರೇಶ ಕೆ. ಖಿರೋಜಿ ಇತರರು
ಹಾಜರಿದ್ದರು. 

error: Content is protected !!