ಇಂದು – ನಾಳೆ ಲಿಂ. ಡಾ. ಚಂದ್ರಮೌಳೀಶ್ವರ ಶ್ರೀ 10ನೇ ಪುಣ್ಯಾರಾಧನೆ, ಅಭಿನಂದನಾ ಸಮಾರಂಭ

ಇಂದು – ನಾಳೆ ಲಿಂ. ಡಾ. ಚಂದ್ರಮೌಳೀಶ್ವರ ಶ್ರೀ  10ನೇ ಪುಣ್ಯಾರಾಧನೆ, ಅಭಿನಂದನಾ ಸಮಾರಂಭ

ಹರಪನಹಳ್ಳಿ ಪಟ್ಟಣದ ತೆಗ್ಗಿನ ಮಠದ ಆವರಣದಲ್ಲಿ ಇಂದು ಮತ್ತು ನಾಳೆ ಶುಕ್ರವಾರ ಮಠದ ಲಿಂಗೈಕ್ಯ ಡಾ.ಚಂದ್ರಮೌಳೀಶ್ವರ ಶಿವಾಚಾರ್ಯ ಸ್ವಾಮೀಜಿಯ 10ನೇ ಪುಣ್ಯಾರಾಧನೆ ಮತ್ತು ಶ್ರೀಗಳ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಅಭಿನಂದನಾ ಸಮಾರಂಭ ಮತ್ತು ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯವರ ಪಟ್ಟಾಧಿಕಾರದ 9ನೇ ವಾರ್ಷಿಕೋತ್ಸವ ಸಮಾ ರಂಭ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಡಾ.ಟಿ.ಎಂ.ಚಂದ್ರಶೇಖರಯ್ಯ ತಿಳಿಸಿದ್ದಾರೆ.

ಇಂದು ಬೆಳಗ್ಗೆ 10.30ಕ್ಕೆ ಲಿಂ. ಶ್ರೀ ಡಾ.ಚಂದ್ರಮೌಳೀಶ್ವರ ಶಿವಾಚಾರ್ಯ ಸ್ವಾಮೀಜಿ 10ನೇ ವಾರ್ಷಿಕ ಪುಣ್ಯಾರಾಧನೆ ಮತ್ತು ಪ್ರಸ್ತುತ ಶ್ರೀಗಳ ಪಟ್ಟಾಧಿಕಾರದ 9ನೇ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 

ಅಧ್ಯಕ್ಷತೆಯನ್ನು ಮಾನಿಹಳ್ಳಿ ಪುರವರ್ಗ ಮಠದ ಶ್ರೀ ಮಳೆಯೋಗೀಶ್ವರ ಶಿವಾಚಾರ್ಯ ಶ್ರೀ ವಹಿಸಲಿದ್ದು, ನೇತೃತ್ವವನ್ನು ಶ್ರೀ ವರಸದ್ಯೋಜಾತ ಶಿವಾಚಾರ್ಯ ಶ್ರೀಗಳು ವಹಿಸಲಿದ್ದಾರೆ, ಕರ್ನಾಟಕ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಟಿ.ಎಂ.ಚಂದ್ರಶೇಖರಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪೂಜಾರ ವೀರಮಲ್ಲಪ್ಪ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ.ದಾರುಕೇಶ, ಟಿ.ಎಂ.ವಿಜಯಕುಮಾರ್ ಸೇರಿದಂತೆ ಇತರೆ ಗಣ್ಯರು ಆಗಮಿಸಲಿದ್ದಾರೆ.

ಇಂದು ಸಂಜೆ 5.30ಕ್ಕೆ ಲಿಂ. ಶ್ರೀ ಡಾ. ಚಂದ್ರಮೌಳೀಶ್ವರ ಶಿವಾಚಾರ್ಯ ಶ್ರೀಗಳಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದು, ಸಮಾರಂಭದ ಸಾನ್ನಿಧ್ಯವನ್ನು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶ್ರೀಗಳು ವಹಿಸುವರು. 

ದಾವಣಗೆರೆ ವಿವಿ ಕುಲಪತಿ ಪ್ರೊ. ಬಿ.ಡಿ.ಕುಂಬಾರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹೊಸಪೇಟೆ ಕಟ್ಟಡ ವಿಭಾಗದ ಮುಖ್ಯಸ್ಥ ಡಾ. ಟಿ.ಎಂ. ವಿಶ್ವನಾಥ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಎಸ್‍ಕೆ ವಿಶ್ವವಿದ್ಯಾಲಯದ ಕುಲಸಚಿವ ಕೆ.ಎನ್.ರುದ್ರೇಶ, ಸಿಂಡಿಕೇಟ್ ಸದಸ್ಯ ಸುರೇಶ್, ಆರ್.ಸಜ್ಜನ್, ಟಿ.ಎಂ.ರಾಜಶೇಖರ್, ಟಿ.ಎಂ.ಶಿವಶಂಕರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿರಲಿದ್ದಾರೆ.

ನಾಳೆ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಮಾರಂಭದ ಸಾನ್ನಿಧ್ಯವನ್ನು ಬಾಳೆಹೊನ್ನೂರು ಶ್ರೀಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶ್ರೀಗಳು ವಹಿಸಲಿದ್ದು, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ತೆಗ್ಗಿನಮಠದ ಕಾರ್ಯದರ್ಶಿ ಡಾ.ಟಿ.ಎಂ.ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೆಎಸ್‍ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಎಂ ಪ್ರಶಾಂತ್, ವಿಶ್ವನಾಥ್‌ ಹಿರೇಮಠ್, ಟಿ.ಎಂ. ಪ್ರತೀಕ್, ಸಮಾಜ ಸೇವಕರಾದ ಲಲಿತಮ್ಮ, ಸಿಪಿಐ ನಾಗರಾಜ, ಎಂ.ಕಮ್ಮಾರ, ಪಿಎಸ್‍ಐ ಶಂಭುಲಿಂಗ ಹಿರೇಮಠ್ ಸೇರಿದಂತೆ ಇತರರು ಉಪಸ್ಥಿತರಿರುವರು.

error: Content is protected !!