ದಾವಣಗೆರೆ, ಡಿ. 12- ನಗರದ ಎಸ್.ಎ. ರವೀಂದ್ರನಾಥ್ ಬಡಾವಣೆಯ ಸುಬ್ರಮಣ್ಯ ನಗರದಲ್ಲಿರುವ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ಕೈಗಾರಿಕೋದ್ಯಮಿ ಎಸ್. ಎಸ್ ಗಣೇಶ್ ಮತ್ತು ಶ್ರೀಮತಿ ರೇಖಾ ಗಣೇಶ್ ಸೇರಿದಂತೆ ಅನೇಕ ಗಣ್ಯರು ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ಸುಬ್ರಮಣ್ಯ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಹಾಗೂ ಎಸ್.ಎಸ್ ಗಣೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಪಿ. ಮುರುಗನ್, ಕಾರ್ಯದರ್ಶಿ ಕೆ. ನಟರಾಜ್, ಉಪಾಧ್ಯಕ್ಷೆ ಈ.ಆರ್. ಶಶಿಕಲಾ, ಸಹ ಕಾರ್ಯದರ್ಶಿ ಸುರೇಶ್ ವಿ. ಮೊದಲಿಯಾರ್ ಸೇರಿದಂತೆ ಇತರರು ಹಾಜರಿದ್ದರು.