ಹರಪನಹಳ್ಳಿ, ಡಿ. 13 – ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಮಂಜುರಾಗಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಪಿ.ರಾಮನಗೌಡ ತಿಳಿಸಿದ್ದಾರೆ.
ಇಲ್ಲಿಯವರೆಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯವಿದ್ದು, ನ್ಯಾಯಾಲಯವು ಬಳ್ಳಾರಿಯಲ್ಲಿದ್ದುದರಿಂದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯವನ್ನು ಬಳ್ಳಾರಿ ಜಿಲ್ಲೆಯಿಂದ ಬೇರ್ಪಡಿಸಿ ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯವನ್ನು ಮಂಜೂರು ಮಾಡುವಂತೆ ವಿಜಯನಗರ ಶಾಸಕ ಹೆಚ್.ಆರ್ ಗವಿಯಪ್ಪ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳು ಶಿಫಾರಸ್ಸು ಮಾಡಿದ್ದಾರೆ.
ಇದರಿಂದಾಗಿ ವಿಜಯನಗರ ಜಿಲ್ಲೆಯ ಸಾರ್ವಜನಿಕರು ಹಾಗೂ ನ್ಯಾಯವಾದಿಗಳು ನ್ಯಾಯಾಲಯಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ದೂರದ ಬಳ್ಳಾರಿಗೆ ಹೋಗವುದು ತಪ್ಪಿದಂತಾಗಿದೆ.