ದಾವಣಗೆರೆ, ಡಿ.13- ನಗರದ ಶಾಮನೂರು ರಸ್ತೆಯಲ್ಲಿರುವ ಶ್ರೀ ಮಹಾಗಣಪತಿ ಹಾಗೂ ಶ್ರೀ ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವವು ಕಳೆದ ದಿನಾಂಕ 10ರ ಮಂಗಳವಾರ ರಾತ್ರಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಜರುಗಿತು. ಸಂಜೆ ನಡೆದ ಕಾರ್ತಿಕೋತ್ಸವದ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು.
ಕಾರ್ತಿಕೋತ್ಸವ ಸಮಾರಂಭಕ್ಕೆ ಶ್ರೀಮದ್ ರಂಭಾಪುರಿ ಡಾ. ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಹರಪನಹಳ್ಳಿ ತೆಗ್ಗಿನಮಠದ ಶ್ರೀಗಳು, ತಾವರಕೆರೆ ಶ್ರೀಗಳು, ಹಿರೇಮಠ ಬಿಳಿಕಿ ಶ್ರೀಗಳು ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ವೀರಯ್ಯ ಸ್ವಾಮಿ, ವಿನಾಯಕ ಶಾಸ್ತ್ರಿ, ರುದ್ರಪ್ರಸಾದ ಸ್ವಾಮಿ ಅವರುಗಳು ಉಪಸ್ಥಿತರಿದ್ದರು.