ಭಾರತೀಯ ರೆಡ್ ಕ್ರಾಸ್ ಸಂಸ್ಥೆ (ದಾವಣಗೆರೆ) ಮತ್ತು ಕೆಎಸ್‌ಆರ್‌ಟಿಸಿ (ದಾವಣಗೆರೆ) ಇವರುಗಳ ಸಹಯೋಗದಲ್ಲಿ ಪ್ರಥಮ ಚಿಕಿತ್ಸೆ ಕಾರ್ಯಾಗಾರ ಕಾರ್ಯಕ್ರಮವನ್ನು ಇಂದು ಮತ್ತು ನಾಳೆ ಎರಡು ದಿನಗಳು ಕಾಲ ಕೆಎಸ್‌ಆರ್‌ಟಿಸಿ ನಿಲ್ದಾಣ ಹಮ್ಮಿಕೊಳ್ಳಲಾಗಿದೆ.
ಇಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೆಎಸ್‌ಆರ್‌ಟಿಸಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್. ಹೆಬ್ಬಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆಯ ಸಭಾಪತಿ ಡಾ. ಎ.ಎಂ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಜ್ಯೋತಿ, ಕೆಎಸ್‌ಆರ್‌ಟಿಸಿ ದಾವಣಗೆರೆ ವಿಭಾಗದ ವಿಭಾಗೀಯ ಯಾಂತ್ರಿಕ ಅಭಿಯಂತರ ಕೆ. ವೆಂಕಟೇಶ್, ವಿಭಾಗೀಯ ಸಂಚಾಲನಾಧಿಕಾರಿ ಡಿ. ಫಕೃದ್ದೀನ್, ದಾವಣಗೆರೆ ಘಟಕ -1 ರ ಘಟಕ ವ್ಯವಸ್ಥಾಪಕ ಕುಮಾರ್ ಉಪಸ್ಥಿತರಿರುವರು.
ಸಂಪನ್ಮೂಲ ವ್ಯಕ್ತಿ ಡಾ. ಕುಮಾರ್ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೆ ತುರ್ತು ಸ್ಥಿತಿಗಳ ನಿರ್ವಹಣೆ ಮತ್ತು ಜೀವ ಉಳಿಸುವ ಪ್ರಥಮ ಚಿಕಿತ್ಸೆ ಕುರಿತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದಾರೆ.