ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಾಲಾ – ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ಕೊಂಡಜ್ಜಿ ರಸ್ತೆಯಲ್ಲಿರುವ ಬಿಜೆಎಂ ಶಾಲೆ ಮತ್ತು ಜಿ.ಎನ್.ಬಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಎಂ ಶಾಲೆಯ ಕಾರ್ಯದರ್ಶಿ ಕೆ.ಎಸ್. ಮಂಜುನಾಥ್ ವಹಿಸಲಿದ್ದಾರೆ.
ಕೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ರುದ್ರಮುನಿ ಹಿರೇಮಠ್ ಅವರು `ಆಧುನಿಕ ಸಾಹಿತ್ಯ ಮತ್ತು ಸ್ವಸ್ಥ ಬದುಕು’ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ.
ಹಿರಿಯ ಉಪನ್ಯಾಸಕರೂ, ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೂ ಆದ ಶ್ರೀಮತಿ ಸುಮತಿ ಜಯಪ್ಪ ಅವರ ನೇತೃತ್ವದಲ್ಲಿ ಏರ್ಪಾಡಾಗಿರುವ ಈ ಕಾರ್ಯಕ್ರಮದಲ್ಲಿ ಶ್ರೀಮತಿ ಕೆ.ಜಿ. ಸೌಭಾಗ್ಯ, ರಟ್ಟಿಹಳ್ಳಿ ಶಿವಕುಮಾರ್ ಉಪಸ್ಥಿತರಿರುವರು.
ಕಸಾಪ ನಿರ್ದೇಶಕ ಷಡಕ್ಷರಪ್ಪ ಎಂ. ಬೇತೂರು ಪ್ರಾಸ್ತಾವಿಕ ನುಡಿಗಳನ್ನಾಡುವರು.