ನಗರದಲ್ಲಿಂದು ತಾ. ಕಸಾಪ ದತ್ತಿ ಉಪನ್ಯಾಸ

ನಗರದಲ್ಲಿಂದು ತಾ. ಕಸಾಪ ದತ್ತಿ ಉಪನ್ಯಾಸ

ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್  ವತಿಯಿಂದ ಶಾಲಾ-ಕಾಲೇಜು ಅಂಗಳ ದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ದೇವರಾಜ ಅರಸು ಬಡಾವಣೆ `ಸಿ’ ಬ್ಲಾಕ್‌ನಲ್ಲಿರುವ ನಂದಗೋಕುಲ ಶಾಲೆ ಯಲ್ಲಿ  ಇಂದು ಬೆಳಿಗ್ಗೆ 11 ಗಂಟೆಗೆ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀಮಾತಾ ವಿದ್ಯಾಸಂಸ್ಥೆಯ ಅಧ್ಯಕ್ಷ ವೈ. ಬಿ. ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹೊನ್ನನಾಯಕನಹಳ್ಳಿ ಪ್ರಗತಿಪರ ರೈತ ಮುರುಗೇಂದ್ರಪ್ಪ `ಜನ ಪದರ ಜೀವ ಪರ ಮೌಲ್ಯಗಳು’ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ.

ಶ್ರೀಮಾತಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಬಿ. ಅನುಸೂಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಉಪನ್ಯಾಸಕರೂ, ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೂ ಆದ ಶ್ರೀಮತಿ ಸುಮತಿ ಜಯಪ್ಪ ಅವರ ನೇತೃತ್ವದಲ್ಲಿ ಏರ್ಪಾಡಾಗಿರುವ ಈ ಕಾರ್ಯಕ್ರಮದಲ್ಲಿ ಡಿ.ಕೆ. ಮಲ್ಲಿಕಾರ್ಜುನ, ಶ್ರೀಮತಿ ಕೆ.ಜಿ. ಸೌಭಾಗ್ಯ, ರಟ್ಟಿಹಳ್ಳಿ ಶಿವಕುಮಾರ್ ಉಪಸ್ಥಿತರಿರುವರು.

ದಾವಣಗೆರೆ ತಾಲ್ಲೂಕು ಕಸಾಪ ನಿರ್ದೇಶಕ ಷಡಕ್ಷರಪ್ಪ ಎಂ. ಬೇತೂರು ಪ್ರಾಸ್ತಾವಿಕ ನುಡಿಗಳನ್ನಾಡುವರು.

error: Content is protected !!