ಜಗಳೂರು, ಡಿ. 17 – ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ 2025ರ ಫೆಬ್ರವರಿ 8 ಮತ್ತು 9 ರಂದು ಜರುಗಲಿರುವ 7ನೇ ವರ್ಷದ ವಾಲ್ಮೀಕಿ ಜಾತ್ರೆಯ ಜಾತ್ರಾ ಸಮಿತಿ ಅಧ್ಯಕ್ಷರನ್ನಾಗಿ ಜಗಳೂರು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರನ್ನು ಬೆಳಗಾವಿಯಲ್ಲಿ ಗುರುವಾರ ನಡೆದ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪೀಠಾಧಿಪತಿಗಳಾದ ಶ್ರೀ ಪ್ರಸನ್ನಾನಂದಪುರಿ ಜಗದ್ಗುರುಗಳವರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
January 22, 2025