ಎಲ್ಲ ಜನಾಂಗದ ಬಡವರಿಗೆ ಸಿಗಲಿದೆ `ಅರಮನೆ’

ಎಲ್ಲ ಜನಾಂಗದ ಬಡವರಿಗೆ ಸಿಗಲಿದೆ `ಅರಮನೆ’

ರಾಣೇಬೆನ್ನೂರು : ವಧು-ವರರಿಗೆ ಬಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಶ್ರೀನಿವಾಸ ಕಾಕಿ

ರಾಣೇಬೆನ್ನೂರು,ಡಿ.18- ಯಾವುದೇ ಜಾತಿ,ಮತ, ಪಂಥ ಎನ್ನದೇ ಸರ್ವ ಜನಾಂಗದ ಬಡವರಿಗೆ ಅನುಕೂಲವಾಗುವ ದೃಷ್ಠಿಯಿಂದ ನಗರದ ಹುಣಿಸಿಕಟ್ಟಿ ರಸ್ತೆಯಲ್ಲಿ ಜೆಸಿ ಅರಮನೆ ನಿರ್ಮಿಸಲಾಗಿದ್ದು, ಅದನ್ನು ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆಚರಣೆಯೊಂದಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ಹೇಳಿದರು.

ನಗರದ ಕಾಕಿ ಜನಸೇವಾ ಸಂಸ್ಥೆ ಸಭಾಭವನದಲ್ಲಿ ಇದೇ ದಿನಾಂಕ 23ರಂದು ನಡೆಯಲಿರುವ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲಿರುವ ವಧು-ವರರ ಜೋಡಿಗಳಿಗೆ ಮದುವೆಯ ಸೀರೆ ಹಾಗೂ ಬಟ್ಟೆಗಳನ್ನು ವಿತರಿಸಿ ಅವರು ಮಾತನಾಡಿದರು. 

ಶ್ರೀ ನೀಲಕಂಠೇಶ್ವರ ಕಾರ್ತಿಕೋತ್ಸವ ಅಂಗವಾಗಿ ದೊಡ್ಡನಾಗಪ್ಪ ಹಾಗೂ ಸಣ್ಣನಾಗಪ್ಪ ಸ್ಮರಣಾರ್ಥವಾಗಿ ಉಚಿತ ಸಾಮೂಹಿಕ ವಿವಾಹ ನಡೆಸಲಾಗುತ್ತಿತ್ತು. ಈ ಬಾರಿ ಅದನ್ನು ಹುಣಿಸಿಕಟ್ಟಿ ರಸ್ತೆಯಲ್ಲಿರುವ ಹೊಸದಾಗಿ ನಿರ್ಮಿಸಿರುವ ಜೆಸಿ ವಾಣಿ ಅರಮನೆ ಕಲ್ಯಾಣ ಮಂಟಪದಲ್ಲಿ ಆಚರಣೆ ಮಾಡಲಾಗು ವುದು. ಸೆ.22ರಂದು ಸಂಜೆ 5ಗಂಟೆಗೆ ನಗರದ ಯರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ 15 ವಧು-ವರರಿಗೆ ಜೋಡಿಗಳಿಗೆ ಪ್ರತ್ಯೇಕ ಸಾರೋಟದಲ್ಲಿ ಭಾಜಾ ಭಜಂತ್ರಿ ಹಾಗೂ ಡಿಜೆಯೊಂದಿಗೆ ಮೆರವಣಿಗೆ ಮಾಡಲಾಗುವುದು. ಶಾಸಕ ಪ್ರಕಾಶ ಕೋಳಿವಾಡ ಮೆರವಣಿಗೆಗೆ ಚಾಲನೆ ನೀಡುವರು.  

ಇದೇ ದಿನಾಂಕ 23ರಂದು ಬೆಳಗ್ಗೆ 11ಗಂಟೆಗೆ ಸಾಮೂಹಿಕ ವಿವಾಹ ಮಹೋತ್ಸವ, ಧರ್ಮಸಭೆ ಹಾಗೂ ಜನಸೇವಾ ಸದಸ್ಯರೊಬ್ಬರಿಗೆ ಉಚಿತ ನಿವೇಶನ ವಿತರಣೆ ಕಾರ್ಯಕ್ರಮ  ನಡೆಯಲಿದೆ. ನಗರದ ಶನೈಶ್ಚರ ಮಂದಿರದ ಶ್ರೀ ವೀರಭದ್ರ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಶಾಸಕ ಪ್ರಕಾಶ ಕೋಳಿವಾಡ ಸಮಾರಂಭ ಉದ್ಘಾಟಿಸು ವರು. ಮಾಜಿ ಶಾಸಕ ಅರುಣಕುಮಾರ ಪೂಜಾರ ಮತ್ತಿತರರು ಆಗಮಿಸಲಿದ್ದಾರೆ.

ಕಾಕಿ ಜನಸೇವಾ ಸಂಸ್ಥೆ ಉಪಾಧ್ಯಕ್ಷ ಶಿವಾನಂದ ಸಾಲಗೇರಿ ಮಾತನಾಡಿ, ವಿವಾಹ ಮಹೋತ್ಸವ ನಂತರ ಸಂಜೆ 7ಗಂಟೆಗೆ ಯರೇ ಕುಪ್ಪಿ ರಸ್ತೆಯ ಶ್ರೀ ನೀಲಕಂಠೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಜರುಗಲಿದೆ. ನಂತರ ಅನ್ನಸಂ ತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾಕಿ ಜನಸೇವಾ ಸಂಸ್ಥೆ ಕಾರ್ಯದರ್ಶಿ ರೂಪಾ ಕಾಕಿ, ಕುರುಹಿನಶೆಟ್ಟಿ ಸಮಾಜದ ಅಧ್ಯಕ್ಷ ಹನುಮಂತಪ್ಪ ಅಮಾಸಿ, ಖಜಾಂಚಿ ಹನುಮಂತಪ್ಪ ಕಾಕಿ, ಕಾರ್ಯದರ್ಶಿ ಮಂಜುನಾಥ ಹೊಸಪೇಟೆ, ಶಿವಾನಂದ ಬಗಾದಿ, ಕೆ.ಸಿ.ನಾಗರಜ್ಜಿ, ನಿತ್ಯಾನಂದ ಕುಂದಾಪುರ, ಕೊಟ್ರೇಶಪ್ಪ ಎಮ್ಮಿ ಮತ್ತಿತರರಿದ್ದರು.

error: Content is protected !!