ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್

ಮಲೇಬೆನ್ನೂರು, ಡಿ. 19- ಜಿ. ಬೇವಿನಹಳ್ಳಿ ಗ್ರಾಮದ ಶ್ರೀ ಸಿದ್ಧಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ನೀಡುವ ಕಾರ್ಯಕ್ರಮವನ್ನು ಯೋಜನಾಧಿಕಾರಿ ವಸಂತ್ ದೇವಾಡಿಗ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಧರ್ಮಸ್ಥಳ ಯೋಜನೆ ಎಂದರೆ ಹೆಣ್ಣು ಮಕ್ಕಳಿಗೆ ಬರೀ ಸಾಲ ಕೊಡುವುದಲ್ಲ. ಸಮಾಜದಲ್ಲಿ ಬದಲಾವಣೆಗಾಗಿ ಡಾ. ವೀರೇಂದ್ರ ಹೆಗ್ಗಡೆ ಅವರು ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ನಮ್ಮ ಯೋಜನೆಯಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸುಜ್ಞಾನ ನಿಧಿ ಮೂಲಕ ಪ್ರತಿ ವರ್ಷ 30 ರಿಂದ 50 ಸಾವಿರ ರೂ.ಗಳವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದೇವೆ.

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ದುಶ್ಚಟಗಳಿಂದ ದೂರ ಇಡಬೇಕೆಂಬ ಉದ್ದೇಶದಿಂದ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುತ್ತಿದ್ದೇವೆ ಎಂದು ವಸಂತ್ ದೇವಾಡಿಗ ತಿಳಿಸಿದು.

ಮುಖ್ಯಶಿಕ್ಷಕ ಪಿ.ಬಿ. ಉಮೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣಕ್ಕೆ ಒತ್ತು ನೀಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ನೆರವಾಗಿರುವ ಡಾ. ವೀರೇಂದ್ರ ಹೆಗಡೆ ಅವರು ದೇಶಕ್ಕೆ ಮಾದರಿ ಎಂದರು.

ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಹಾಗೂ ಪತ್ರಕರ್ತ ಜಿಗಳಿ ಪ್ರಕಾಶ್, ಯೋಜನೆಯ ವಲಯ ಮೇಲ್ವಿಚಾರಕ ಹರೀಶ್, ಶಿಕ್ಷಕರಾದ ಆರ್. ಯಲ್ಲಪ್ಪ, ಕಮಲಾಕ್ಷಪ್ಪ ಕಲ್ಲೇರ್ ಮತ್ತಿತರರು ವೇದಿಕೆಯಲ್ಲಿದ್ದರು.

error: Content is protected !!