ದಾವಣಗೆರೆ, ಡಿ. 19- ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯೋತ್ಸವದ ಅಂಗವಾಗಿ ದತ್ತಿ ಉಪನ್ಯಾಸ ಕಾರ್ಯಕ್ರಮವು ಶ್ರೀ ಮಾತಾ ವಿದ್ಯಾಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ನಂದಗೋಕುಲ ಆಂಗ್ಲ ಮಾಧ್ಯಮ ನರ್ಸರಿ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆಯಿತು.
ಶಾಲೆಯ ಅಧ್ಯಕ್ಷ ವೈ.ಬಿ. ಸತೀಶ್ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿ ಶ್ರೀಮತಿ ಅನುಸೂಯ ಬಿ. ಮತ್ತು ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಡಿ.ಕೆ. ಹಾಗೂ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ರೆಹಾನ ಬಾನು ನಾಸಿಕ ಅವರುಗಳು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ ಹಾಗೂ ನಿರ್ದೇಶಕರುಗಳಾದ ಶ್ರೀಮತಿ ಕೆ.ಜಿ ಸೌಭಾಗ್ಯ, ಷಡಕ್ಷರಪ್ಪ ಎಂ. ಬೇತೂರು ಮತ್ತು ಗುರುಮೂರ್ತಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಗತಿಪರ ರೈತರಾದ ಮುರುಗೇಂದ್ರಪ್ಪ ಜನಪದರ ಜೀವ ಪರ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡಿದರು. ಶಾಲೆಯ ವಿದ್ಯಾರ್ಥಿಗಳು ಕನ್ನಡ ಅಭಿಮಾನಿಗಳ ದೇಶಾಭಿಮಾನಿಗಳ, ಜ್ಞಾನಪೀಠ ಪುರಸ್ಕೃತರ ವೇಷವನ್ನು ಧರಿಸಿ ಕಂಗೊಳಿಸಿದರು.