ದಾವಣಗೆರೆ, ಡಿ. 27 – ಮಾನವನ ಮನಸ್ಸನ್ನು ಸುಸಂಸ್ಕೃತಗೊಳಿಸುವುದೇ ಶಿಕ್ಷಣದ ಉದ್ದೇಶವಾಗಿದೆ ಎಂದು ಪ್ರೊ. ಮಲ್ಲಿಕಾರ್ಜುನ ಆರ್. ಹಲಸಂಗಿ ತಿಳಿಸಿದರು.
ನಗರದ ಕಲಾ ಮತ್ತು ವಾಣಿಜ್ಯ ಕಾಲೇಜಿನ ಈಚೆಗೆ ಆಯೋಜಿಸಿದ್ದ 2024-25ನೇ ಸಾಲಿನ ಸಾಂಸ್ಕೃತಿಕ ವೇದಿಕೆ, ಯುವ ರೆಡ್‌ಕ್ರಾಸ್ ಘಟಕ, ಎನ್‌ಸಿಸಿ, ಕ್ರೀಡಾ ವಿಭಾಗ ಉದ್ಯೋಗ ಭರವಸೆ ಕೋಶ, ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ `ಪರಿಚಯ’ ಉದ್ಘಾಟಿಸಿ ಮಾತನಾಡಿದರು.
ಮೌಲ್ಯಾಧಾರಿತ ಶಿಕ್ಷಣ ಪಡೆಯುವುದರಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಭಾವನಾತ್ಮಕ, ವೈಚಾರಿಕ ಮತ್ತು ವಿಶ್ಲೇಷಣಾತ್ಮಕ ಶಕ್ತಿಗಳನ್ನು ಬಳಸಿಕೊಂಡರೆ ತಮ್ಮ ಭವಿಷ್ಯವನ್ನು ತಾವೇ ಕಟ್ಟಿಕೊಳ್ಳಬಹುದು ಎಂದು ಹೇಳಿದರು.
ಪ್ರತಿಯೊಬ್ಬ ವಿದ್ಯಾರ್ಥಿಯು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಮತ್ತು ಜವಾಬ್ದಾರಿ ಯುತ ಜೀವನ ಸಾಗಿಸುವಂತವರು ಆಗಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ.ಜಿ.ಬಿ ಬೋರಯ್ಯ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು, ಆಗ ಯಶಸ್ಸು ಸಿಗಲಿದೆ ಎಂದು ಹೇಳಿದರು.
ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬೊಮ್ಮಣ್ಣ ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅನಿತಾ ಕುಮಾರಿ, ರಶ್ಮಿ, ಡಾ.ಹೆಚ್.ಆರ್ ತಿಪ್ಪೇಸ್ವಾಮಿ, ರಮೇಶ ಪೂಜಾರ್, ಆನಂದ್, ಡಾ. ಚಮನ್‌ಸಾಬ್, ಪರಶುರಾಮ, ಕರಿಬಸಪ್ಪ, ಕವಿತಾ ಪಾಟೀಲ್, ಸಲ್ಮಾಂ, ಸೌಮ್ಯ ಆಚಾರ್, ಮೌಸಿನಾ ಕೌಸರ್, ಬೀಬಿ ಅಮಿನಾ, ರೇಖಾ, ಸ್ವಪ್ನ, ಗಾಯತ್ರಿ, ರೇಖಾ ಇತರರು ಇದ್ದರು.