ಸರಸ್ವತಿ ನಗರ ಮುಖ್ಯ ರಸ್ತೆಯಲ್ಲಿ ಗುಂಡಿ : ಸುವರ್ಣ ಕರ್ನಾಟಕ ವೇದಿಕೆ ಪ್ರತಿಭಟನೆ

ಸರಸ್ವತಿ ನಗರ ಮುಖ್ಯ ರಸ್ತೆಯಲ್ಲಿ ಗುಂಡಿ :  ಸುವರ್ಣ ಕರ್ನಾಟಕ ವೇದಿಕೆ ಪ್ರತಿಭಟನೆ

ದಾವಣಗೆರೆ, ಡಿ. 29 – ಇಲ್ಲಿನ ಸರಸ್ವತಿ ನಗರ ಎಸ್.ಎಸ್. ಹಾಸ್ಪಿಟಲ್‌ಗೆ ಹೋಗುವ ಮಾರ್ಗ ಮಧ್ಯದಲ್ಲಿ ಚರಂಡಿ ಗುಂಡಿ ಬಿದ್ದಿದ್ದು, ಕಳೆದ 20 ದಿನಗಳಿಂದ ಈ ಅವ್ಯವಸ್ಥೆ ಕಂಡು ಬಂದರೂ ಅಲ್ಲಿಯ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಈ ಕಡೆ ಗಮನಹರಿಸಿಲ್ಲ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಎಚ್ಚೆತ್ತು ಪರಿಶೀಲಿಸಿ ಸುಗಮ ಸಂಚಾರಕ್ಕೆ ಸರಿಪಡಿಸಿಕೊಡಬೇಕೆಂದು ಸುವರ್ಣ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಮಾಡಲಾಯಿತು.

ದಿನನಿತ್ಯ ನೂರಾರು ವಾಹನಗಳು ಸಂಚರಿಸಲು ಮತ್ತು ಶಾಲಾ ಮಕ್ಕಳು ಸಾರ್ವಜನಿಕರು ಓಡಾಡಲು ತೊಂದರೆ ಆಗುತ್ತಿದ್ದು, ಇದರ ಬಗ್ಗೆ ಆ ಭಾಗದ ಜನಪ್ರತಿನಿಧಿಗಳ ಗಮನಕ್ಕೆ ತಂದರು ನಿರ್ಲಕ್ಷ ವಹಿಸಿದ್ದಾರೆ ಎಂದು ಸುವರ್ಣ ಕರ್ನಾಟಕ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಆರ್. ಸಂತೋಷ್‌ಕುಮಾರ್ ಪ್ರತಿಭಟನೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಶಾಂತಕುಮಾರ್ ದೊಡ್ಡಮನಿ, ರಾಜ್ಯ ಉಪಾಧ್ಯಕ್ಷರು ಶಿವಕುಮಾರ್ ಸುಂಕಾಪುರ್, ಜಿಲ್ಲಾ ಉಪಾಧ್ಯಕ್ಷ ರವಿಕುಮಾರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. 

error: Content is protected !!