ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಅಮಾವಾಸ್ಯೆ ಪೂಜೆ

ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಅಮಾವಾಸ್ಯೆ ಪೂಜೆ

ಡಿ. ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ  ಇಂದು ಎಳ್ಳ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಬೆಳಿಗ್ಗೆ ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ  ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯುವುದು ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. ದೇವರಾಜ ಅರಸು ಬಡಾವಣೆ ಎ ಬ್ಲಾಕ್‌ನ ಶ್ರೀ ವಿನಾಯಕ ಸೇವಾ ಸಮಿತಿಯವರು  ಸೇವಾಕರ್ತರಾಗಿದ್ದಾರೆ ಎಂದು ದೇವ ಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

error: Content is protected !!