ದಾವಣಗೆರೆ, ಡಿ. 29- ಕೃಷಿ ಆರ್ಥಿಕತೆಯ ಮಹತ್ವವನ್ನು ಅರಿತು ರೈತರ ಪರಿಸ್ಥಿತಿಯನ್ನು ಗುರುತಿಸಿ ರೈತರಿಗೆ ಪೂರಕವಾಗುವ ಯೋಜನೆಗಳನ್ನು ಚರಣ್‌ಸಿಂಗ್ ಅವರು ತಂದಿದ್ದರು ಎಂದು ಸ್ಮರಿಸಿ, ಶ್ರಮಜೀವಿಗಳಾದ ರೈತರು ಎಂದಿಗೂ ಗೌರವಿಸಲ್ಪಡುವ ವ್ಯಕ್ತಿಗಳಾಗಿರುತ್ತಾರೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಅವರು ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಭಾರತದ 5ನೇ ಪ್ರಧಾನ ಮಂತ್ರಿ ಚರಣ್‌ಸಿಂಗ್ ಸ್ಮರಣಾರ್ಥ ಏರ್ಪಡಿಸಿದ್ದ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ರೈತರನ್ನು ಗೌರವಿಸಿ ಮಾತನಾಡಿದರು.
ದಾವಣಗೆರೆ ಜಿಲ್ಲೆಯ ರೈತರುಗಳಾದ ಮಹೇಶ್ವರಪ್ಪ, ಯಲೋದಹಳ್ಳಿ ರವಿಕುಮಾರ್, ಆಲೂರು ಪ್ರಶಾಂತ್, ಹೂವಿನಮಡು ನಾಗರಾಜ್ ಎನ್. ಗಾಣದಕಟ್ಟೆಯ ಅಂಜಿನಿ, ಪಾಮೇನಹಳ್ಳಿ ಗೌಡ್ರು ಶೇಖರಪ್ಪ ಅವರುಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ, ಮಹಾನಗರ ಪಾಲಿಕೆ ಮೇಯರ್ ಕೆ. ಚಮನ್ ಸಾಬ್, ವೀರಭದ್ರಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಹರಿಹರ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ಎಸ್. ಮಲ್ಲಿಕಾರ್ಜುನ್, ಕೇರಂ ಗಣೇಶ್ ಮತ್ತಿತರರಿದ್ದರು.