ಹೊಸ ವರ್ಷ ಸಂಭ್ರಮ : ಕುಡಿದು ತೊಂದರೆ ಕೊಟ್ಟರೆ ಕಠಿಣ ಕ್ರಮ

ಹೊಸ ವರ್ಷ ಸಂಭ್ರಮ : ಕುಡಿದು ತೊಂದರೆ ಕೊಟ್ಟರೆ ಕಠಿಣ ಕ್ರಮ

ಎಚ್ಚರಿಕೆ ನೀಡಿದ ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ, ಡಿ.30- ಹೊಸ ವರ್ಷದ ಆಚರಣೆಯ ಹಿನ್ನೆಲೆ ಜಿಲ್ಲೆಯಾದ್ಯಂತ ಜಿಲ್ಲಾ ಪೊಲೀಸ್‌ ವತಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಡಿಸೆಂಬರ್‌ 31ರ ರಾತ್ರಿ ಹೊಸ ವರ್ಷಾಚರಣೆಯ ಕಾರ್ಯ ಕ್ರಮಗಳಲ್ಲಿ ಆಯೋ ಜಕರು, ಸಂಘಟಕರು ಹಾಗೂ ಸಾರ್ವ ಜನಿಕರು ಪೊಲೀಸ್‌ ಇಲಾಖೆಯ ನಿಯಮ ಉಲ್ಲಂಘಿಸಿದ್ದಲ್ಲಿ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪೊಲೀಸ್‌  ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಅವರು ಎಚ್ಚರಿಕೆ ನೀಡಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಕಾರ್ಯ ಕ್ರಮದ ಆಯೋಜಕರು, ಸಾರ್ವಜನಿಕರು ನಿಗಧಿತ ಸಮಯಕ್ಕೆ ಪಾರ್ಟಿಯನ್ನು  ಮುಕ್ತಾಯ ಮಾಡಬೇಕು ಮತ್ತು ಸಂಚಾರ ನಿಯಮ ಉಲ್ಲಂಘನೆ, ಕುಡಿದು ವಾಹನ ಚಾಲನೆ, ವಾಹನಗಳಲ್ಲಿ ಹೆಚ್ಚಿನ ಜನರು ಸವಾರಿ ಮಾಡುವುದು ಹಾಗೂ ವ್ಹೀಲಿಂಗ್ ಮಾಡುವ ದೃಶ್ಯ ಕಂಡು ಬಂದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಹಿರಿಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿ ಗಳು ಹಾಗೂ ಮನೆಯ ಅಕ್ಕ-ಪಕ್ಕದವರಿಗೆ ತೊಂದರೆ ಮಾಡಬಾರದು. ಯುವಕರು ಅಶ್ಲೀಲವಾಗಿ, ಅಸಭ್ಯ ವಾಗಿವರ್ತಿಸಬಾರದು, ಮಹಿಳೆಯರಿಗೆ ಚುಡಾಯಿಸ ಬಾರದು. ಮತ್ತು ಕಾರ್ಯಕ್ರಮಗಳ ಆಯೋಜಕರು ಗಳು ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿ ಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಪಾನಮತ್ತರಾಗಿ ನಾಗರಿಕರಿಗೆ ತೊಂದರೆ ಮಾಡಬಾರದು. ಅತೀ ವೇಗದ ವಾಹನ ಚಾಲನೆ ಮಾಡಬಾರದು. ಸಾರ್ವಜ ನಿಕ ಸ್ಥಳ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಪಟಾಕಿ ಸಿಡಿಸಬಾರದು ಮತ್ತು ಅಗ್ನಿ ಅವಘಡ ಆಗದಂತೆ ಮುನ್ನೆಚ್ಚರಿಕೆಯಿಂದ ಇರಬೇಕು. ಕರ್ಕಶ ಶಬ್ದ ಹಾಗೂ ಡಿ.ಜೆ ಸೌಂಡ್ಸ್‌ ಬಳಸಬಾರದು. ಲೌಡ್‌ ಸ್ಪೀಕರ್‌ ಬಳಸುವಾಗ ನ್ಯಾಯಾಲಯ ಹಾಗೂ ಸರ್ಕಾರದ ಆದೇಶ ಉಲ್ಲಂಘನೆ ಮಾಡಬಾರದು ಮತ್ತು ಶಬ್ದ ಮಾಲಿನ್ಯ ಆಗದಂತೆ ಧ್ವನಿ ವರ್ಧಕ ಬಳಸಬೇಕು.

ಸಾಮಾಜಿಕ ಜಾಲತಾಣ ಗಳಲ್ಲಿ ಕೋಮು ಪ್ರಚೋದಕ, ಧಾರ್ಮಿಕ ನಿಂದನೆ ಹಾಗೂ ಸುಳ್ಳು ಸುದ್ದಿ ಹರಡಿಸಬಾರದು. ಅಹಿತಕರ ಘಟನೆಗಳು ಕಂಡುಬಂದಲ್ಲಿ ತುರ್ತು ಸಹಾಯ ವಾಣಿ 112ಕ್ಕೆ ಕರೆ ಮಾಡಬೇಕು ಹಾಗೂ ಸ್ಥಳೀಯ ಪೊಲೀಸ್ ಠಾಣೆ, ಪೊಲೀಸ್ ಅಧಿಕಾರಿ ಅಥವಾ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಹೊಸ ವರ್ಷದ ಆಚರಣೆ ನಡೆಸುವ ಆಯೋಜಕರು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿರಬೇಕು. ನೈತಿಕ ಪೊಲೀಸ್ ಗಿರಿ ಮತ್ತು ಅನುಚಿತ ವರ್ತನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಪೊಲೀಸ್ ಇಲಾಖೆ ಕೈಗೊಂಡ ಕ್ರಮ : ನಗರದ ವಿವಿಧ ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ಕುಡಿದು ವಾಹನ ಚಾಲನೆ ಮಾಡುವವರು, ತ್ರಿಬಲ್ ರೈಡಿಂಗ್ ಹಾಗೂ ವ್ಹೀಲಿಂಗ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ತಾಲ್ಲೂಕು ಕೇಂದ್ರಗಳಾದ ಹರಿಹರ, ಹೊನ್ನಾಳಿ, ಚನ್ನಗಿರಿ, ಜಗಳೂರು,  ನ್ಯಾಮತಿ ಪಟ್ಟಣಗಳಲ್ಲಿ ಸೂಕ್ತ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆ ಸಂಬಂಧ ಅಗತ್ಯ ಪೊಲೀಸ್ ಅಧಿಕಾರಿ-ಸಿಬ್ಬಂದಿಯನ್ನು ನಿಯೋಜಿಸಿದ್ದು, ಆಯ ಕಟ್ಟಿನ ಸ್ಥಳಗಳಲ್ಲಿ ಕೆಎಸ್‌ಆರ್‌ಪಿ ಮತ್ತು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಜಿಲ್ಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್, ವೈನ್ ಶಾಪ್‌ಗಳು ನಿಗದಿಪಡಿಸಿದ ಸಮಯಕ್ಕೆ ಬಂದ್ ಮಾಡಲು ಸೂಚಿಸಿದ್ದು, ನಗರದ ಹೊರವಲಯಗಳಾದ ಕೊಂಡಜ್ಜಿ ಕೆರೆ, ದೇವರ ಬೆಳಕೆರೆ ಚೆಕ್ ಡ್ಯಾಂ ಮತ್ತು ವಿವಿಧೆಡೆ ಪೊಲೀಸ್ ನಿಯೋಜನೆ ಮಾಡಲಾಗಿದೆ.

ಕಾರ್ಯಕ್ರಮಗಳ ಆಯೋಜಕರುಗಳಿಗೆ ಈಗಾಗಲೇ ಯಾವುದೇ ಅವಘಡಗಳು ಸಂಭವಿಸದಂತೆ ಸೂಕ್ತ ಪೂರ್ವ ಸಿದ್ದತೆ ಮತ್ತು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ. ನಗರದ ಅಗತ್ಯವಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್‌ ನಿಗಾ ವಹಿಸಲಾಗುವುದು ಎಂದು ಎಸ್ಪಿ ಉಮಾ ಅವರು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

error: Content is protected !!