ನಗರದಲ್ಲಿ ವಿಶ್ವ ಕನ್ನಡ ಸಮ್ಮೇಳನದ ಆಯೋಜನೆಗೆ ಆಗ್ರಹಿಸಲು ನಾಳೆ ಸಭೆ

ನಗರದಲ್ಲಿ ವಿಶ್ವ ಕನ್ನಡ ಸಮ್ಮೇಳನದ ಆಯೋಜನೆಗೆ ಆಗ್ರಹಿಸಲು ನಾಳೆ ಸಭೆ

ದಾವಣಗೆರೆ, ಡಿ. 31- ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸುವಂತೆ ಸರ್ಕಾರವನ್ನು ಒತ್ತಾಯಿಸಲು ನಾಡಿದ್ದು ದಿನಾಂಕ 2 ರ ಗುರುವಾರ ಮಧ್ಯಾಹ್ನ 3  ಘಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಆಶ್ರಯದಲ್ಲಿ ಸರ್ವ ಕನ್ನಡಿಗರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದ್ದಾರೆ. 

ಇದೇ ದಿನಾಂಕ 5 ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಲಿದ್ದು, ಅಂದು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ನೇತೃತ್ವದಲ್ಲಿ ನಿಯೋಗದ ಮೂಲಕ ಭೇಟಿ ಮಾಡಿ ಮನವಿ ಸಲ್ಲಿಸಬೇಕಾಗಿರುವ ಹಿನ್ನೆಲೆ ಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ. 

ಜಿಲ್ಲೆಯ ವಿದ್ವಾಂಸರು, ಸಾಹಿತಿಗಳು, ಕವಿಗಳು, ಕಲಾವಿದರು, ಪತ್ರಕರ್ತರು,  ಜನಪ್ರತಿ ನಿಧಿಗಳು,  ರಾಜಕೀಯ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಹೋರಾಟಗಾರರು, ಸರ್ಕಾರಿ-ಸರ್ಕಾರೇತರ ನೌಕರ ಸಂಘಟನೆಗಳ ನಾಯಕರು, ಕಾರ್ಮಿಕ ಸಂಘಟನೆಗಳ ಮುಖಂಡರು, ರೈತ ಮುಖಂಡರು, ಕನ್ನಡ ಸಾಹಿತ್ಯ ಪರಿಷತ್ತಿನ  ಸದಸ್ಯರು ಸೇರಿದಂತೆ ಸರ್ವ ಕನ್ನಡಿಗರು ಸಭೆಗೆ ಆಗಮಿಸಿ ತಮ್ಮ ಅತ್ಯಮೂಲ್ಯ ಸಲಹೆ, ಸೂಚನೆ, ಮಾರ್ಗದರ್ಶನವನ್ನು ನೀಡುವಂತೆ  ಬಿ.ವಾಮದೇವಪ್ಪ  ವಿನಂತಿಸಿದ್ದಾರೆ.

error: Content is protected !!