ಶ್ರೀ ಎಸ್. ನಿಜಲಿಂಗಪ್ಪ ಬಡಾವಣೆಯ ಬಕ್ಕೇಶ್ವರ ಶಾಲೆ ಹತ್ತಿರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದು ಶ್ರೀ ಅಯ್ಯಪ್ಪ ಸ್ವಾಮಿಯ ಪಡಿಪೂಜೆ ನಡೆಯಲಿದೆ. ಬೆಳಗ್ಗೆ 6-30 ಗಂಟೆಗೆ ಶ್ರೀ ಓಂಕಾರ ಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ಸುಬ್ರಮಣ್ಯಸ್ವಾಮಿ ದೇವರುಗಳಿಗೆ ಪಂಚಾಮೃತ ಅಭಿಷೇಕ ಮತ್ತು ಗಣಹೋಮ, ಮಹಾ ಮಂಗಳಾರತಿ ನೆರವೇರಲಿದೆ. ಮಧ್ಯಾಹ್ನ 3 ಗಂಟೆಗೆ ಮಹಾ ದೀಪೋತ್ಸವವು ಜರುಗುವುದು ಹಾಗೂ ರಾತ್ರಿ 8 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಇರುತ್ತದೆ.
January 5, 2025