ದಾವಣಗೆರೆ, ಜ. 1- ಅಡ್ಡಿ ಆತಂಕಗಳ ನಡುವೆಯೂ ಮೇರು ನಟರಾಗಿ ಬೆಳೆದು, ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸಿದ್ದ ಕೀರ್ತಿ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾಧ್ಯಕ್ಷ ವಿ. ತಿರುಮಲೇಶ್ (ಸ್ವಾಮಿ) ಅಭಿಪ್ರಾಯಪಟ್ಟರು.
ಇಲ್ಲಿನ ಭಗತ್‍ಸಿಂಗ್ ಆಟೋ ನಿಲ್ದಾಣದಲ್ಲಿ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ 15 ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಷ್ಣು ಅವರು ಕೇವಲ ಕಲಾವಿದರಾಗಿರಲಿಲ್ಲ. ಸಮಾಜದ ಒಳತಿಗಾಗಿ ಶ್ರಮ ವಹಿಸಿದ್ದರು ಎಂದು ಹೇಳಿದರು.
ಬೆಂಗಳೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಮಾರಕ ನಿರ್ಮಿಸಲು ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.
ವಿಷ್ಣುವರ್ಧನ್ ಅವರ ನಾಡು-ನುಡಿ ಸೇವೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವುದೇ ಪ್ರಶಸ್ತಿ ನೀಡಿಲ್ಲ. ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿದರು.
ನಗರಸಭೆ ಮಾಜಿ ಸದಸ್ಯ ಎನ್.ಜೆ. ನಿಂಗಪ್ಪ, ಪತ್ರಕರ್ತ ಹನುಮಂತಪ್ಪ ಹಾಲಿವಾಣ, ವಿನಾಯಕ ಪಗಡೆ, ಬಿಜೆಪಿ ಮುಖಂಡ ಲಕ್ಷ್ಮಣ್, ಆವರಗೆರೆ ಶೇಖರಪ್ಪ, ಮಲ್ಲಯ್ಯ ಹಿರೇಮಠ್, ಶಿವಕುಮಾರ್, ಆಟೋ ಚಾಲಕರುಗಳು ಹಾಗೂ ಅಭಿಮಾನಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.