ಬಾಳೆಹೊನ್ನೂರು, ಜ. 1 – ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆ ಅಲೇರು ಮಂಡಲ ಕೊಲನುಪಾಕ ಶ್ರೀ ಚಂಡಿಕಾಂಬಾ ಸಮೇತ ಸ್ವಯಂಭೂ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದೇ ದಿನಾಂಕ 7 ರಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗ ಳವರ 69ನೇ ಜನ್ಮ ದಿನೋತ್ಸವ ಹಾಗೂ ವೀರಶೈವ ಸಂಸ್ಕೃತಿ ಸಂವರ್ಧನಾ ಸಮಾರಂಭ ನಡೆಯಲಿದೆ. ನಾಡಿದ್ದು ದಿನಾಂಕ 3 ರಿಂದ 7ರ ವರೆಗೆ ಪ್ರತಿ ದಿನ ಪ್ರಾತ: ಕಾಲ ಶ್ರೀ ಜಗದ್ಗುರು ರೇಣುಕಾಚಾರ್ಯರು ಅವತ ರಿಸಿದ ಶ್ರೀ ಸ್ವಯಂಭೂ ಸೋಮೇಶ್ವರ ಮಹಾಲಿಂಗಕ್ಕೆ ಮಹಾರುದ್ರಾಭಿಷೇಕ, ವಿಶೇಷ ಪೂಜೆ, ಸಹಸ್ರ ಪುಷ್ಪಾರ್ಚನೆ ಹಾಗೂ ಶ್ರೀ ಚಂಡಿಕಾಂಬಾ ದೇವಿಗೆ ಕುಂಕುಮಾರ್ಚನೆ ಹಾಗೂ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಜರುಗುವುದು. ಐದೂ ದಿನಗಳ ಸಮಾರಂಭಗಳಲ್ಲಿ ಕರ್ನಾಟಕ ಮತ್ತು ತೆಲಂಗಾಣದ ಸಚಿವರು, ಗಣ್ಯರು, ವಿವಿಧ ಮಠಾಧೀಶರು ಪಾಲ್ಗೊಳ್ಳುವರು.
January 5, 2025