ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಇಂದು ಮಧ್ಯಾಹ್ನ 3 ಘಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸರ್ವ ಕನ್ನಡಿಗರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದ್ದಾರೆ.
ಇದೇ ದಿನಾಂಕ 5 ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಲಿದ್ದು, ಅಂದು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ನೇತೃತ್ವದಲ್ಲಿ ನಿಯೋಗದ ಮೂಲಕ ಭೇಟಿ ಮಾಡಿ ಮನವಿ ಸಲ್ಲಿಸಬೇಕಾಗಿರುವ ಹಿನ್ನೆಲೆ ಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ ಎಂದು ವಾಮದೇವಪ್ಪ ವಿವರಿಸಿದ್ದಾರೆ.