ಹರಪನಹಳ್ಳಿ, ಜ. 2 – ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಯ ಮ್ಮನಹಳ್ಳಿಯ ಶಿಕ್ಷಕರಾದ ಬಂದೋಳ ಸಿದ್ದಪ್ಪ ಅವರು ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲಿಕಟ್ಟಿಯ ಶಿಕ್ಷಕ ಟಿ. ರಾಜಕುಮಾರ ಇವರು ಆಯ್ಕೆಯಾಗಿರುತ್ತಾರೆ. ಹಿಂದೆ ಇದ್ದ ಅಧ್ಯಕ್ಷರಾಗಿದ್ದ ಬಿ. ರಾಜಶೇಖರ, ಕಾರ್ಯದರ್ಶಿ ಕೆ. ನಟರಾಜ್ ಇವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸರ್ಕಾರಿ ನೌಕರರ ಭವನದಲ್ಲಿ ನಡೆದ ಶಿಕ್ಷಕರ ಸಂಘದ ಸಭೆಯಲ್ಲಿ ಬಿ. ಸಿದ್ದಪ್ಪ ಅವರನ್ನು ಅಧ್ಯಕ್ಷರನ್ನಾಗಿ ರಾಜಕುಮಾರ ಇವರನ್ನು ಕಾರ್ಯದರ್ಶಿಗಳನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪನವರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಬಿ. ಶಿವಾನಂದ ರಾಜ್ಯ ಉಪಾಧ್ಯಕ್ಷ ಬಿ. ಪದ್ಮಲತಾ ಹಾಗೂ ಶಿಕ್ಷಕರ ಸಂಘದ ಸರ್ವ ಚುನಾಯಿತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು