ದಾವಣಗೆರೆ,ಜ. 5- ಬಿ.ಐ.ಇ.ಟಿ ಕಾಲೇಜಿನ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಭಾನುವಾರ ಆಯೋಜಿಸಲಾದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯ ವಿವಿಧ ಜಾನಪದ ನೃತ್ಯಗಳ ವೈಭವ ಮೇಳೈಯಿಸಿತು. 29 ಜಿಲ್ಲೆಗಳಿಂದ ಆಗಮಿಸಿದ ತಂಡಗಳು ವಿಭಿನ್ನ ರೀತಿಯ ಡೊಳ್ಳು ಕುಣಿತ, ಕೋಲಾಟ, ಜಾನಪದ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.
ಶಾಸಕರಾದ ಬಸವರಾಜ್ ವಿ.ಶಿವಗಂಗಾ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅವರು ಸ್ಪರ್ಧಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.