ದಾವಣಗೆರೆ,ಜ. 5- ಕೆಟಿಜೆ ನಗರ 2ನೇ ಕ್ರಾಸ್, 2ನೇ ಮೇನ್ನಲ್ಲಿ ಶ್ರೀ ಗುರು ರೇವಣಸಿದ್ದೇಶ್ವರ, ಶ್ರೀ ಆಂಜನೇಯ ಸ್ವಾಮಿ, ಶ್ರೀ ಮಹಾಗಣಪತಿ, ಶ್ರೀ ಶನೈಶ್ಚರ, ಶ್ರೀ ನವಗ್ರಹ ಸನ್ನಿಧಿ, ಶ್ರೀ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಕಡೇ ಕಾರ್ತಿಕ ದೀಪೋತ್ಸವವು ಈಚೆಗೆ ನಡೆಯಿತು.
ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.