ದಾವಣಗೆರೆ, ಜ. 5- ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಎಂಬಿಎ ಕಾಲೇಜು ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಅವರು ಮಾತನಾಡಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಶೇ.60ರಷ್ಟು ಕಮೀಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಸಿದರು.
ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ, ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿವೆ. ನೌಕರರ ವೇತನ, ಡೀಸೆಲ್ ಬೆಲೆ ಏರಿಕೆ, ಬಸ್ಸು ಗಳನ್ನು ಕೊಳ್ಳುವುದು ಹಾಗೂ ಹಣದುಬ್ಬ ರವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆ ಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದರಿಂದ ಬೆಲೆಯೇರಿಸಲಾಗಿದೆ ಎಂದರು.
ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.
ಕೆಪಿಸಿಸಿ, ಮುಖ್ಯಮಂತ್ರಿಗಳ ಬದಲಾ ವಣೆಯ ಕುರಿತು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಚಿವ ನಾಗೇಂದ್ರ ಅವರ ರಾಜೀ ನಾಮೆಯಿಂದ ಖಾಲಿಯಾಗಿರುವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ಆದರೆ ಈ ವಿಷಯ ನ್ಯಾಯಾಲಯದ ಮುಂದಿದ್ದು, ಅಲ್ಲಿಯೇ ಇತ್ಯರ್ಥವಾಗಬೇಕಿದೆ ಎಂದರು.
ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಊಟಕ್ಕೆ ಸೇರುವುದೇ ತಪ್ಪೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.