ಹರಪನಹಳ್ಳಿ, ಜ. 6 – ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ನಾ. ಡಿಸೋಜ ಅವರ ನಿಧನಕ್ಕೆ ಹರಪನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕಂಬನಿ ಮಿಡಿದಿದೆ.
ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿರುವ ಡಿಸೋಜ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತ್ ತಾಲ್ಲೂಕು ಅಧ್ಯಕ್ಷ ಕೆ. ಉಚ್ಚೆಂಗೆಪ್ಪ, ಮಾಜಿ ಅಧ್ಯಕ್ಷ ಡಿ. ರಾಮನಮಲಿ, ಮಾಡ್ಲಿಗೇರಿ ಸುಭದ್ರಮ್ಮ, ಎಚ್. ಮಲ್ಲಿಕಾರ್ಜುನ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಸಂಗಪ್ಪನವರ್, ಸಾಹಿತಿಗಳಾದ ಇಸ್ಮಾಯಿಲ್ ಎಲಿಗಾರ್, ಬಸವರಾಜ ಪೂಜಾರ್, ಬಸವರಾಜ ಕರುವಿನ, ಮಮ್ತಾಜ್ ಬೇಗಂ, ಕನ್ನಡ ಸಾಹಿತ್ಯ ಪರಿಷತ್ತ್ ಗೌರವ ಕಾರ್ಯದರ್ಶಿ ಆರ್. ಪದ್ಮರಾಜ್ ಜೈನ್, ಮಹಾದೇವಪ್ಪ, ಗೌರವ ಕೋಶಾಧಿಕಾರಿ ರಾಘವೇಂದ್ರ ಶೆಟ್ಟಿ ಸೇರಿದಂತೆ ಇತರರು ಸಂತಾಪ ಸೂಚಿಸಿದ್ದಾರೆ.
ನಾ. ಡಿಸೋಜ ಅವರದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ ಎರಡೂ ಒಂದೇ ಬರೆದಂತೆ ಬದುಕಿದವರು, ಬದುಕಿದಂತೆ ಬರೆದವರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ. ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.