ಬೆಂಗಳೂರು, ಜ. 8 – ಇಲ್ಲಿನ ಮಣಿಪಾಲ್ ಆಸ್ಪತ್ರೆಯಲ್ಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನಲ್ಲಿ ಪಂಚಪೀಠದ ಮೂವರು ಜಗದ್ಗುರುಗಳು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕಾಶಿ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಶ್ರೀಶೈಲ ಪೀಠದ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಉಜ್ಜಯಿನಿ ಪೀಠದ ಶ್ರೀ ಸಿದ್ಧಲಿಂಗ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಎಸ್ಸೆಸ್ ಅವರಿಗೆ ಆಶೀರ್ವದಿಸಿದರು.