ದಾವಣಗೆರೆ, ಜ.8- ಬಸಾಪುರದ ಶ್ರೀನಿವಾಸ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ರಜತ ಮಹೋತ್ಸವ ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಿನ್ನೆ ಜರುಗಿದವು. ಪಾಂಡೋಮಟ್ಟಿ ವಿರಕ್ತಮಠದ ಡಾ. ಗುರುಬಸವ ಸ್ವಾಮಿಗಳು ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು. ಹಿರಿಯ ಸಾಹಿತಿ ಬಾ.ಮ. ಬಸವರಾಜಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಡಾ. ಎಸ್.ಹೆಚ್. ಮಂಜುನಾಥ್ ಕುರ್ಕಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಸಿ.ಎಂ. ವಿಜಯ ಕುಮಾರ್ ಸ್ವಾಗತಿಸಿದರು. ಸಹ ಕರ್ಯದರ್ಶಿ ಶ್ರೀಮತಿ ಸುನಿತಾ ಅತಿಥಿಗಳನ್ನು ಪರಿಚಯಿಸಿದರು. ಸಹ ಶಿಕ್ಷಕಿಯರಾದ ವೈ.ಬಿ. ಸುಮ ನಿರೂಪಿಸಿದರು. ಶ್ರೀಮತಿ ಗೌರಮ್ಮ ವಾರ್ಷಿಕ ವರದಿ ಮಂಡಿಸಿದರು ಶ್ರೀಮತಿ ಚಂದನ ವಂದಿಸಿದರು.
January 9, 2025