ಆರ್.ಎಲ್.ಕಾನೂನು ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11ಕ್ಕೆ ಆಯೋಜಿಸಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಕಾನೂನು ಮತ್ತು ಧರ್ಮ ಕುರಿತು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣಕುಮಾರ್, ಹೈಕೋರ್ಟ್ ವಕೀಲ ಎಂ.ಆರ್.ಹಿರೇಮಠದ್ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಜಿ.ಎಸ್.ಯತೀಶ್ ವಹಿಸಲಿದ್ದಾರೆ. ಟಿ.ವಿದ್ಯಾಧರ ವೇದವರ್ಮ ಇತರರು ಆಗಮಿಸಲಿದ್ದಾರೆ.
ನಗರಕ್ಕೆ ಇಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್
