ದಾವಣಗೆರೆ, ಜ. 13- ಎಸ್ಸೆಸ್ ಅವರನ್ನು ಹರಿಹರ ಕಾಂಗ್ರೆಸ್ ಮುಖಂಡರಾದ ನಂದಿಗಾವಿ ಶ್ರೀನಿವಾಸ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಕೆ.ಎಸ್. ಬಸವಂತಪ್ಪ, ಮಲೇಬೆನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ಅಬಿದಾಲಿ, ಹರಿಹರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್. ಬಿ. ಹನುಮಂತಪ್ಪ, ಹರಿಹರ ತಾಲ್ಲೂಕು ಪಂಚಾಯತ್ ಕೆಡಿಪಿ ಸದಸ್ಯ ಬಿ.ಬಿ.ಮಲ್ಲೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಎಸ್ಸೆಸ್ ಭೇಟಿ ಮಾಡಿದ ನಂದಿಗಾವಿ ಶ್ರೀನಿವಾಸ್
