ದಾವಣಗೆರೆ, ಜ. 14- ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಈಚೆಗೆ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ವಿಶೇಷ ಚೇತನ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಶ್ರೀ ವಿನಾಯಕ ಎಜುಕೇಷನ್ ಸೊಸೈಟಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಮೌನೇಶ್ವರಿ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಿವರಾಜ್ ಮತ್ತು ಭಾರ್ಗವಿ ಪ್ರಥಮ, ಯಶೋಧ ಜಿ., ಅಂಬಿಕಾ ಕೆ., ಮೈಲಾರಿ ಬಿ.ಆರ್., ಶಿವರಾಜ್ ಅವರುಗಳು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.