ಜಗಳೂರು, ಜ.16- ಮಾಜಿ ಶಾಸಕ ಎಸ್.ವಿ. ರಾಮಚಂದ್ರ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಿ ಸಂಭ್ರಮಿಸಿದರು. ನಂತರ ಪಟ್ಟಣದ ಹನುಮಂತರೆಡ್ಡಿ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನೋಟ್ ಬುಕ್ ಮತ್ತು ಪೆನ್ನುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಜೆ. ವಿ. ನಾಗರಾಜ್, ವಕೀಲ ಡಿ.ವಿ. ನಾಗಪ್ಪ, ಪಟ್ಟಣ ಪಂಚಾಯತ್ ಸದಸ್ಯರಾದ ಪಾಪ ಲಿಂಗಪ್ಪ, ಯುವ ಮುಖಂಡರಾದ ರಮೇಶ್, ಗೌರಿಪುರ ಶಿವಣ್ಣ, ಲ್ಯಾಬ್ ಶಿವಕುಮಾರ್, ಧರ್ಮ ನಾಯಕ್, ಯೋಗೀಶ್, ಸೇರಿದಂತೆ ಅನೇಕ ಕಾರ್ಯಕರ್ತರು ಅಭಿಮಾನಿಗಳು ಇದ್ದರು.
January 17, 2025