ಹರಪನಹಳ್ಳಿ, ಜ. 17- ಉಡಾ ಫೆಯಿಂದ ಮಾತ ನಾಡುವ ಅಧಿಕಾರಿ ಗಳನ್ನು ಕೂಡಲೇ ಸೇವೆಯಿಂದ ಅಮಾನತ್ತು ಮಾಡಬೇಕು ಎಂದು ಭಾರತೀಯ ಮಾನವ ಹಕ್ಕುಗಳ ಹಿತರಕ್ಷಣಾ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಲಗುಂದ ಗ್ರಾಮದ ಜಮೀನಿಗೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಿಂದ ತಹಶೀಲ್ದಾರ್ ಕಛೇರಿ ಹಾಗೂ ಸಹಾಯಕ ಆಯುಕ್ತರ ಕಛೇರಿ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗಳಲ್ಲಿ ನ್ಯಾಯ ಒದಗಿಸಿ ಕೊಡಲು ಲಿಖಿತ ಅರ್ಜಿಗಳನ್ನು ಸಲ್ಲಿಸಿದರೂ ಸಂಬಂ ಧಿಸಿದ ಅಧಿಕಾರಿಗಳು ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೇ ದಾರಿ ತಪ್ಪಿಸುವ ಕೆಲಸ ಮಾಡಿ, ತಮ್ಮ ಮನಬಂದಂತೆ ಮಾಹಿತಿ ಮತ್ತು ಆದೇಶ ನೀಡಿದ್ದು ದುರಂತ ಸಂಗತಿ ಎಂದು ದೂರಿದರು.
ಕೃಷಿಕ ರೈತ ಪರ ಹೋರಾಟಗಾರ ಇ. ಕರಿಬಸಪ್ಪ ಮಾತನಾಡಿ, ದಾಖಲೆ ಗಳನ್ನು ಸರಿಯಾಗಿ ಪರಿಶೀಲಿಸದೆ ಇರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಇದರ ಬಗ್ಗೆ ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸ್ಥಳ ಪರಿಶೀಲಿಸಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಮತ್ತು ಕಂದಾಯ ಮಂತ್ರಿಯವರಿಗೆ ದೂರು ಸಲ್ಲಿಸಿ, ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ ಎಂದರು.
ಗೋಷ್ಠಿಯಲ್ಲಿ ಸದಸ್ಯರಾದ ಇ. ಆನಂದಪ್ಪ, ಹಾಲಸ್ವಾಮಿ ಮಾಡಲಗೇರಿ, ಅನಂತ ರಾಜ, ತಿರುಪತೆಪ್ಪ, ದುರುಗಪ್ಪ, ಪ್ರಭು ಸೇರಿದಂತೆ ಇತರರು ಉಪಸ್ಥಿತರಿದ್ದರು.