ಹರಿಹರ.ಜ.19- ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಿಸಲಾಯಿತು.
ಶಾಸಕ ಬಿ.ಪಿ. ಹರೀಶ್ ವೇಮನರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ವೇಮನರ ತತ್ವಾದರ್ಶಗಳನ್ನು ಯುವಕರು ಜೀವನಕ್ಕೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ತಹಶೀಲ್ದಾರ್ ಗುರುಬಸವರಾಜ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ರೆಡ್ಡಿ ಸಮಾಜದ ಅಧ್ಯಕ್ಷರು, ಮುಖಂಡರು ಹಾಗೂ ಕಚೇರಿಯ ಸಿಬ್ಬಂದಿ ಇದ್ದರು.